ADVERTISEMENT

36 ಕರವೇ ಕಾರ್ಯಕರ್ತರಿಗೆ ಜಾಮೀನು ಮಂಜೂರು

ಸೋಮವಾರ ಬಿಡುಗಡೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2024, 23:21 IST
Last Updated 6 ಜನವರಿ 2024, 23:21 IST
   

ದೇವನಹಳ್ಳಿ: ನಾಮಫಲಕದಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ವೇಳೆ ಬಂಧಿಸಲಾಗಿದ್ದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿ 36 ಕಾರ್ಯಕರ್ತರಿಗೆ ದೇವನಹಳ್ಳಿಯ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.

ಪಟ್ಟಣದ ಹೊರ ವಲಯದಲ್ಲಿರುವ ಸಾದಹಳ್ಳಿ ಟೋಲ್‌ನಿಂದ‌ ಹೊರಟ ಜಾಗೃತಿ ಜಾಥಾ ವೇಳೆ ಕರವೇ ಕಾರ್ಯಕರ್ತರು ಇಂಗ್ಲಿಷ್ ನಾಮಫಲಕಗಳನ್ನು ಧ್ವಂಸ ಮಾಡಿದ್ದರು. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಮೂರು ಪ್ರಕರಣ ದಾಖಲಾಗಿದ್ದವು.

ಆ ಪೈಕಿ ಒಂದು ಪ್ರಕರಣದಲ್ಲಿ ನಾರಾಯಣಗೌಡ ಸೇರಿ 36 ಕಾರ್ಯಕರ್ತರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ₹2 ಲಕ್ಷ ಬಾಂಡ್ ಸಲ್ಲಿಸುವಂತೆ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ADVERTISEMENT

ಇನ್ನುಳಿದ ಎರಡು ಪ್ರಕರಣದಲ್ಲಿ ಠಾಣಾ ಜಾಮೀನು ಸಿಗುವ ಸಾಧ್ಯತೆ ಇರುವುದರಿಂದ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ. ಎಲ್ಲ 36 ಕರವೇ ಕಾರ್ಯಕರ್ತರು ಬಹುತೇಕ ಸೋಮವಾರ ಬಿಡುಗಡೆಯಾಗುವ ಸಾಧ್ಯತೆ ಇದೆ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.