ದೊಡ್ಡಬಳ್ಳಾಪುರ: ತಾಲ್ಲೂಕಿನ ಜಾಲಿಗೆ ಮತ್ತು ಹುಲುಕುಡಿ ಬೆಟ್ಟದ ಸಾಲಿನ ಸೂಲುಕುಂಟೆ ಗ್ರಾಮದ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
ಬೆಟ್ಟದ ಸಾಲುಗಳಿಗೆ ಹೊಂದಿಕೊಂಡಿರುವ ಸೂಲುಕುಂಟೆ ಗ್ರಾಮಕ್ಕೆ ವನ್ಯಜೀವಿಗಳು ಇತ್ತೀಚೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುವುದು ಸಾಮಾನ್ಯವಾಗಿದೆ. ಸಾಕು ಪ್ರಾಣಿಗಳನ್ನು ಕೊಂಡೊಯ್ಯುವ ಮೂಲಕ ರೈತರು ಆಂತಕಕ್ಕೆ ಒಳಗಾಗುವಂತೆ ಮಾಡಿದೆ. ಈ ವ್ಯಾಪ್ತಿಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಹಸು, ನಾಯಿ, ಕೋಳಿಗಳಿಗಾಗಿ ಗ್ರಾಮಕ್ಕೆ ನುಗ್ಗುತ್ತಿವೆ. ಕೆಲ ತಿಂಗಳ ಹಿಂದೆಯಷ್ಟೇ ಹೆಣ್ಣು ಚಿರತೆ ಬೋನಿಗೆ ಬಿದ್ದಿತ್ತು. ಈಗ ಗಂಡು ಚಿರತೆ ಸೆರೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.