ಆನೇಕಲ್ : ತಾಲ್ಲೂಕಿನ ಅತ್ತಿಬೆಲೆ ಪುರಸಭೆ ಅಧ್ಯಕ್ಷರಾಗಿ ಮಾಲಾ ರಮೇಶ್ ಅವರು ಶನಿವಾರ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ಶಿವಪ್ಪ.ಎಚ್.ಲಮಾಣಿ ತಿಳಿಸಿದರು.
ಅತ್ತಿಬೆಲೆ ಪುರಸಭೆಯ ಅಧ್ಯಕ್ಷರಾಗಿದ್ದ ಅಲ್ಲಬಕಾಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶನಿವಾರ ನಿಗದಿಯಾಗಿತ್ತು. ಬಿಜೆಪಿ ಬೆಂಬಲಿತ ಮಾಲಾ ರಮೇಶ್ ಮತ್ತು ಬಿಜೆಪಿ ಬಂಡಾಯ ಅಭ್ಯರ್ಥಿ ಸುವರ್ಣಮ್ಮ ಅವರು ನಾಮಪತ್ರ ಸಲ್ಲಿಸಿದರು. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಾಲಾ ರಮೇಶ್ ಅವರು 14ಮತ ಪಡೆದು ಜಯಗಳಿಸಿದರು. ಸುವರ್ಣಮ್ಮ ಅವರು 9 ಮತ ಪಡೆದರು.
ನೂತನ ಅಧ್ಯಕ್ಷೆ ಮಾಲಾ ರಮೇಶ್ ಮಾತನಾಡಿ, ಅತ್ತಿಬೆಲೆ ಪುರಸಭಾ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಮೂಲಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ವಹಿಸಲಾಗುವುದು. ಎಲ್ಲಾ ಸದಸ್ಯರ ವಿಶ್ವಾಸಕ್ಕೆ ಪಡೆದು ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಅತ್ತಿಬೆಲೆ ಪುರಸಭೆ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸಮಸ್ಯೆ ಒಂದು ಸವಾಲಾಗಿದೆ. ಸಾರ್ವಜನಿಕರ ಸಹಕಾರದಿಂದ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುಲಾಗುವುದು. ಕಸ ವಿಲೇವಾರಿ ಘಟಕ ಸ್ಥಾಪಿಸಲು ಕ್ರಮ ವಹಿಸಲಾಗುವುದು ಎಂದರು.
ಅತ್ತಿಬೆಲೆ ಬಸವರಾಜು, ಅತ್ತಿಬೆಲೆ ಸುರೇಶ್, ಗಣೇಶ್, ಮುನಿರಾಜು, ನಾರಾಯಣಸ್ವಾಮಿ, ವೆಂಕಟೇಶ್, ಎಸ್.ಎಂ.ಆರ್.ಮಂಜುನಾಥ್, ಗೋವಿಂದರಾಜು, ನಾಗರಾಜು ಸೋನಿ, ಮುರಳಿ, ಮೀನಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.