ADVERTISEMENT

ಆನೇಕಲ್ | ಕಾಡಾನೆ ದಾಳಿ: ಅರಣ್ಯ ವಾಚರ್‌ ಸಾವು

​ಪ್ರಜಾವಾಣಿ ವಾರ್ತೆ
Published 12 ಜುಲೈ 2024, 23:39 IST
Last Updated 12 ಜುಲೈ 2024, 23:39 IST
<div class="paragraphs"><p>ಚಿಕ್ಕಮಾದಯ್ಯ</p></div>

ಚಿಕ್ಕಮಾದಯ್ಯ

   

ಆನೇಕಲ್: ತಾಲ್ಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಹಕ್ಕಿಪಿಕ್ಕಿ ಕಾಲೋನಿಯ ದೊಡ್ಡಬಂಡೆ ಬಳಿ ಶುಕ್ರವಾರ ಬೆಳಗಿನ ಜಾವ ಕಾಡಾನೆ ದಾಳಿಯಿಂದಾಗಿ ಅರಣ್ಯ ವಾಚರ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತಪಟ್ಟ ಅರಣ್ಯ ಇಲಾಖೆಯ ವಾಚರ್‌ನನ್ನು ಚಿಕ್ಕಮಾದಯ್ಯ (54) ಎಂದು ಗುರುತಿಸಲಾಗಿದೆ.

ADVERTISEMENT

ಚಿಕ್ಕಮಾದಯ್ಯ ಸುಮಾರು 20 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆಯಲ್ಲಿ ವಾಚರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅರಣ್ಯದ ಬೀಟ್‌ಗಾಗಿ ತಂಡದೊಂದಿಗೆ ತೆರಳಿ ಗುರುವಾರ ರಾತ್ರಿ ಪಹರೆ ನಡೆಸುತ್ತಿದ್ದರು. ಬೆಳಗಿನ ಜಾವ ದೊಡ್ಡಬಂಡೆಯಿಂದ ಪಕ್ಕಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಡಾನೆಯೊಂದು ದಾಳಿ ನಡೆಸಿದ್ದರಿಂದ ಚಿಕ್ಕಮಾದಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಾದಯ್ಯ ಅನುಭವಿ ವಾಚರ್‌ ಆಗಿದ್ದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಆನೆಗಳ ಕಾರ್ಯಾಚರಣೆ, ಹುಲಿ ಕಾರ್ಯಾಚರಣೆ, ಕಾಡ್ಗಿಚ್ಚು ಸೇರಿದಂತೆ ಎಲ್ಲಾ ಕೆಲಸಗಳಲ್ಲಿಯೂ ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಮಾದಯ್ಯ ಅವರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬದ ರೋಧನ ಮುಗಿಲು ಮುಟ್ಟಿತ್ತು. ಮನೆಯ ದುಡಿಯುವವರು ಮಡಿದಿದ್ದರಿಂದ ಕುಟುಂಬದವರ ನೋವು ಮಡುಗಟ್ಟಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಅರಣ್ಯ ರಕ್ಷಕ ಚಿಕ್ಕಮಾದಯ್ಯ ಕಾಡಾನೆ ದಾಳಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮೃತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡುವ ಭರವಸೆ ನೀಡಿದರು.

ಚಿಕ್ಕಮಾದಯ್ಯ (54)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.