ಆನೇಕಲ್: ಆನೇಕಲ್ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿಯ ವಿರುದ್ಧ ಮತ ಚಲಾಯಿಸಿದ ಇಬ್ಬರು ಪುರಸಭೆಯ ಸದಸ್ಯರನ್ನು ಬಿಜೆಪಿ ಆರು ವರ್ಷ ಉಚ್ಚಾಟನೆ ಮಾಡಿದೆ.
ಪುರಸಭೆಯ ಅಧ್ಯಕ್ಷೆ ಸುಧಾ ನಿರಂಜನ್ ಮತ್ತು ಸದಸ್ಯ ಸುರೇಶ್ ಬಾಬು ಅವರನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರು ಪಕ್ಷದಿಂದ ಉಚ್ಚಾಟಿಸಿದ್ದಾರೆ.
ಆಗಸ್ಟ್ 31ರಂದು ಆನೇಕಲ್ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಸುಧಾ ನಿರಂಜನ್ ಅವರು ಅಧ್ಯಕ್ಷ ಸ್ಥಾನಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ವಿಪ್ ಉಲ್ಲಂಘನೆ ಮತ್ತು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಉಚ್ಚಾಟಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.