ADVERTISEMENT

ಲೋಕಾಯಕ್ತರ ಆದೇಶ: ರಾಜಕಾಲುವೆ ಒತ್ತುವರಿ ತೆರವು

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 15:53 IST
Last Updated 17 ಅಕ್ಟೋಬರ್ 2024, 15:53 IST
ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಪುರಸಭೆ ವ್ಯಾಪ್ತಿಯಲ್ಲಿನ ರಾಜಕಾಲುವೆಯನ್ನು ಒತ್ತುವರಿ ತೆರವುಗೊಳಿಸಲಾಯಿತು
ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಪುರಸಭೆ ವ್ಯಾಪ್ತಿಯಲ್ಲಿನ ರಾಜಕಾಲುವೆಯನ್ನು ಒತ್ತುವರಿ ತೆರವುಗೊಳಿಸಲಾಯಿತು   

ಆನೇಕಲ್: ತಾಲ್ಲೂಕಿನ ಬೊಮ್ಮಸಂದ್ರ ಪುರಸಭೆ ವ್ಯಾಪ್ತಿಯ ಕೆರೆಗೆ ನೀರು ಹರಿದು ಬರುವ ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದ ಎಸ್ಸೆ ಟರೋಕ ಕಂಪನಿಯ ಶೆಡ್‌ವೊಂದನ್ನು ಲೋಕಾಯುಕ್ತರ ಆದೇಶದಂತೆ ಪುರಸಭೆ ಮತ್ತು ತಾಲ್ಲೂಕು ಆಡಳಿತದಿಂದ ತೆರವುಗೊಳಿಸಲಾಯಿತು.

ಸ್ಥಳೀಯ ಶಾಂತಕುಮಾರ್‌ ಎಂಬುವರು ನೀಡಿದ ದೂರು ಆಧರಿಸಿ ಲೋಕಾಯುಕ್ತರು ನೀಡಿದ ಆದೇಶದಂತೆ ರಾಜಕಾಲುವೆ ಒತ್ತುವರಿ ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಎಸ್ಸೆ ಟರೋಕ ಕಂಪನಿಯು ರಾಜಕಾಲುವೆ ಒತ್ತುವರಿ ಮಾಡಿ ಶೆಡ್‌ ನಿರ್ಮಿಸಿದ್ದರಿಂದ ಕೆರೆಗೆ ನೀರು ಹರಿಯುವುದಕ್ಕೆ ತೊಡಕಾಗಿತ್ತು.  ಕೆರೆಯ ನೀರಿನ ಮೂಲ ಮುಚ್ಚ ಹೋಗಿತ್ತು. ಹಲವು ಬಾರಿ ದೂರು ನೀಡಿದರೂ ಕ್ರಮ ಕೈಗೊಂಡಿರಲಿಲ್ಲ. ಒತ್ತುವರಿ ಜಾಗದಲ್ಲಿ ನಿರ್ಮಿಸಲಾಗಿದ್ದ ಶೆಡ್‌ ಕಟ್ಟಡ ತೆರವುಗೊಳಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.