ADVERTISEMENT

ಅನ್ನಭಾಗ್ಯ: ಸದ್ಯಕ್ಕೆ ಹೆಚ್ಚುವರಿ ಅಕ್ಕಿ ವಿತರಣೆ ಇಲ್ಲ– ಸಚಿವ ಕೆ.ಎಚ್‌.ಮುನಿಯಪ್ಪ

ಅಕ್ಕಿ ಬದಲು ಹಣ ಪಾವತಿ: ಸಚಿವ ಕೆ.ಎಚ್‌.ಮುನಿಯಪ್ಪ

​ಪ್ರಜಾವಾಣಿ ವಾರ್ತೆ
Published 7 ಜನವರಿ 2024, 20:09 IST
Last Updated 7 ಜನವರಿ 2024, 20:09 IST
ಕೆ.ಎಚ್‌. ಮುನಿಯಪ್ಪ
ಕೆ.ಎಚ್‌. ಮುನಿಯಪ್ಪ   

ದೊಡ್ಡಬಳ್ಳಾಪುರ: ಅನ್ನಭಾಗ್ಯ ಯೋಜನೆ ಅಡಿ ಘೋಷಿಸಿದಂತೆ ಹೆಚ್ಚುವರಿ ಅಕ್ಕಿ ವಿತರಿಸಲು ಎಲ್ಲಿಯೂ ಅಕ್ಕಿ ಸಿಗುತ್ತಿಲ್ಲ. ಹಾಗಾಗಿ ಸದ್ಯಕ್ಕೆ ಹೆಚ್ಚುವರಿ ಅಕ್ಕಿ ಬದಲು ಹಣ ಕೊಡುವುದನ್ನೆ ಮುಂದುವರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದ್ದಾರೆ.

ಅಕ್ಕಿ ಖರೀದಿಗೆ ಆಂಧ್ರಪ್ರದೇಶದೊಂದಿಗೆ ಮಾತುಕತೆ ನಡೆಸಲಾಗಿದೆ. ಅಲ್ಲಿಯೂ ಅಕ್ಕಿ ಕೊರತೆ ಇದೆ. ಮಾತುಕತೆ ಇನ್ನೂ ಅಂತಿಮವಾಗಿಲ್ಲ. ಹಾಗಾಗಿ ಹೆಚ್ಚುವರಿ ಅಕ್ಕಿ ವಿತರಿಸುವುದು ಕಷ್ಟವಾಗಲಿದೆ ಎಂದು ಭಾನುವಾರ ಗೂಳ್ಯ ಗ್ರಾಮದಲ್ಲಿ ಹೇಳಿದರು. 

ಫಲಾನುಭವಿಗಳಿಗೆ ಹೆಚ್ಚುವರಿ ಐದು ಕೆ.ಜಿ ಅಕ್ಕಿ ಬದಲು ಬ್ಯಾಂಕ್‌ ಖಾತೆಗಳಿಗೆ ಹಣ ಜಮೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ನಂತರ ಬರ ಪರಿಸ್ಥಿತಿ ಇದ್ದು, ಸಾಕಷ್ಟು ಜನ ಅಕ್ಕಿಯನ್ನೇ ನೀಡುವಂತೆ ಕೇಳುತ್ತಿದ್ದಾರೆ. ಆದರೆ, ಸದ್ಯದ ಸ್ಥಿತಿಯಲ್ಲಿ ಹೆಚ್ಚುವರಿ ಅಕ್ಕಿ ವಿತರಣೆ ಕಷ್ಟ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.