ADVERTISEMENT

ಅಕ್ರಮ ಕಸಾಯಿಖಾನೆ ತೆರವುಗೊಳಿಸಿ: ಭಜರಂಗದಳ ಒತ್ತಾಯ

​ಪ್ರಜಾವಾಣಿ ವಾರ್ತೆ
Published 28 ಜನವರಿ 2021, 2:41 IST
Last Updated 28 ಜನವರಿ 2021, 2:41 IST
ವಿಜಯಪುರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಜರಂಗದಳ ಜಿಲ್ಲಾ ಘಟಕದ ಸಂಚಾಲಕ ವಿ. ಕೃಷ್ಣಮೂರ್ತಿ ಮಾತನಾಡಿದರು
ವಿಜಯಪುರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಜರಂಗದಳ ಜಿಲ್ಲಾ ಘಟಕದ ಸಂಚಾಲಕ ವಿ. ಕೃಷ್ಣಮೂರ್ತಿ ಮಾತನಾಡಿದರು   

ವಿಜಯಪುರ: ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕೆಲಸವನ್ನು ಸ್ಥಳೀಯ ಅಧಿಕಾರಿಗಳು ಮಾಡುವ ಮೂಲಕ ಪಟ್ಟಣದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಕಸಾಯಿಖಾನೆಗಳನ್ನು ತೆರವುಗೊಳಿಸಬೇಕು ಎಂದು ಭಜರಂಗದಳ ಜಿಲ್ಲಾ ಘಟಕದ ಸಂಚಾಲಕ ವಿ. ಕೃಷ್ಣಮೂರ್ತಿ ಒತ್ತಾಯಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಸಾಯಿಖಾನೆಗಳನ್ನು ನಡೆಸುತ್ತಿದ್ದಾರೆ. ಇದರಿಂದಾಗಿ ಕೊಳಚೆ ನೀರು ಹರಿಯಬೇಕಾಗಿರುವ ಚರಂಡಿಗಳಲ್ಲಿ ರಕ್ತ ಹರಿಯುತ್ತಿದೆ. ಇದನ್ನು ವಿರೋಧಿಸುವವರ ಮನೆಗಳ ಮುಂದೆ ರಾತ್ರಿವೇಳೆ ರಕ್ತ ತಂದು ಎರಚುವಂತಹ ಕೆಲಸ ಮಾಡುತ್ತಿದ್ದಾರೆ. ಕೆಲವು ವ್ಯಾಪಾರಿಗಳು ಹನುಮಂತಶೆಟ್ಟಿ ಎಂಬುವರಿಗೆ ಕೊಲೆ ಬೆದರಿಕೆಯನ್ನೂ ಹಾಕುತ್ತಿದ್ದಾರೆ ಎಂದು ದೂರಿದರು.

ಇಂತಹ ಕೃತ್ಯಗಳ ಬಗ್ಗೆ ಪುರಸಭೆ ಹಾಗೂ ಸ್ಥಳೀಯ ಪೊಲೀಸರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಕೊಟ್ಟಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಟೀಕಿಸಿದರು.

ADVERTISEMENT

ಅಕ್ರಮವಾಗಿ ಕಸಾಯಿಖಾನೆಗಳಿಗೆ ಗೋವುಗಳು ಎಲ್ಲಿಂದ ಬರುತ್ತಿವೆ ಎನ್ನುವ ಕುರಿತು ತನಿಖೆಯಾಗಬೇಕು. ಗೋವುಗಳ ಹತ್ಯೆಗೆ ನಿಷೇಧವಿದ್ದರೂ ರಾಜಾರೋಷವಾಗಿ ಮಾಡುತ್ತಿರುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಅಧಿಕಾರಿಗಳು ವಿಫಲರಾದರೆ ಹೋರಾಟ ನಡೆಸುತ್ತೇವೆ ಎಂದರು.

ವಿಶ್ವ ಹಿಂದೂ ಪರಿಷತ್ತಿನ ಸಂಚಾಲಕ ಆನಂದ್, ಮಹೇಶ್, ಹನುಮಂತಶೆಟ್ಟಿ, ನಯನ್‌ ಕೆ. ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.