ದೊಡ್ಡಬಳ್ಳಾಪುರ: ಆಶಾ ಕಾರ್ಯಕರ್ತರಿಗೆ ಬಮೂಲ್ ವತಿಯಿಂದ ಏಪ್ರಿಲ್ ತಿಂಗಳಲ್ಲಿ ₹ 3 ಸಾವಿರ ಗೌರವ ಧನ ನೀಡಲು ಬುಧವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಬಮೂಲ್ ಹಾಗೂ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್‌ಕುಮಾರ್ ತಿಳಿಸಿದರು.
ಬಮೂಲ್ ವ್ಯಾಪ್ತಿಯಲ್ಲಿ 2,700 ಜನ ಆಶಾ ಕಾರ್ಯಕರ್ತೆಯರು ಕೊರೊನಾ ಜಾಗೃತಿ ಸಂಬಂಧಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಬಮೂಲ್ ಬೆಂಬಲ ನೀಡಲಿದೆ ಎಂದು ಹೇಳಿದರು.
ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿಗೆ ಹಾಲು ಸಂಗ್ರಹದ ಆಧಾರದ ಮೇಲೆ ಸಂಬಳವನ್ನು ₹ 2 ರಿಂದ 3 ಸಾವಿರಕ್ಕೆ ಹೆಚ್ಚಿಸಲಾಗಿದೆ. ಬಮೂಲ್ ನಿತ್ಯ 15 ಲಕ್ಷ ಲೀಟರ್ ಹಾಲು ಸಂಗ್ರಹ ಮಾಡುತ್ತಿದೆ. ಇದರಲ್ಲಿ 1.80 ಲಕ್ಷ ಲೀಟರ್ ಹಾಲನ್ನು ಉಚಿತವಾಗಿ ವಿತರಿಸಲು ಸರ್ಕಾರ ಖರೀದಿ ಮಾಡುತ್ತಿದೆ. 7.5 ಲಕ್ಷ ಲೀಟರ್ ಹಾಲು ಮಾರಾಟ, 2 ಲಕ್ಷ ಲೀಟರ್ ಮೊಸರು ಮಾರಾಟ ಮಾಡಲಾಗುತ್ತಿದೆ
ಎಂದರು.
ಲಾಕ್‌ಡೌನ್ ಹಿನ್ನೆಲೆಯಲ್ಲಿ ಹಾಲಿನ ಮಾರಾಟ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ ರೈತರಿಂದ ಹಾಲು ಸಂಗ್ರಹವನ್ನು ನಿಲ್ಲಿಸಬಾರದು ಎನ್ನುವ ಉದ್ದೇಶದಿಂದ ಲಾಕ್‌ಡೌನ್ ಮುಕ್ತಾಯವಾಗುವ ತನಕ ರೈತರಿಂದ ಸಂಗ್ರಹಿಸುವ ಪ್ರತಿ ಲೀಟರ್ ಹಾಲಿಗೆ ₹ 1.50 ಪೈಸೆ ಕಡಿಮೆ ಮಾಡಲಾಗಿದೆ ಎಂದು ಮಾಹಿತಿ ಅವರು ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.