ವಿಜಯಪುರ(ದೇವನಹಳ್ಳಿ): ಪಟ್ಟಣ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಕಟ್ಟಿರುವ ಬಂಟಿಂಗ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲಾಯಿತು. ಇದರಿಂದ ಹಲವು ಅಪಘಾತಗಳಾಗಿ ಸಾವು-ನೋವು ಸಂಭವಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಎಲ್ಲ ರಾಜಕೀಯ ಪಕ್ಷಗಳು, ಎಲ್ಲ ಧರ್ಮಗಳ ಬ್ಯಾನರ್ ತೆರವುಗೊಳಿಸುವಂತೆ ಪೊಲೀಸ್ ಮಹಾನಿರ್ದೇಶಕರು ನೀಡಿದ ಸೂಚನೆ ಮೇರೆಗೆ ಸೋಮವಾರ ಪಟ್ಟಣದಲ್ಲಿನ ಎಲ್ಲ ಬ್ಯಾನರ್‌ಗಳನ್ನು ಪೊಲೀಸರು ಹಾಗೂ ಪುರಸಭೆ ಕಾರ್ಮಿಕರು ತೆರವುಗೊಳಿಸಿದರು.
ಜನ್ಮದಿನದ ಶುಭಾಶಯ, ವಿವಿಧ ಕಾರ್ಯಕ್ರಮಗಳಿಗೆ ಶುಭ ಕೋರಲು, ಮರಣ ಹೊಂದಿರುವವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಹಿನ್ನೆಲೆಯಲ್ಲಿ ಕಟ್ಟಿರುವ ಬ್ಯಾನರ್‌ಗಳಿಂದಾಗಿ ಅಪಘಾತ ಹಾಗೂ ಸಂಘರ್ಷಕ್ಕೆ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ತೆರವುಗೊಳಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.