ADVERTISEMENT

ಬನ್ನೇರುಘಟ್ಟ: ಮತ್ತೆ ಮೂರು ಜಿಂಕೆಗಳ ಸಾವು

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2023, 17:09 IST
Last Updated 20 ಸೆಪ್ಟೆಂಬರ್ 2023, 17:09 IST
ಆನೇಕಲ್‌ ತಾಲ್ಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಂರಕ್ಷಿಸಲಾದ ಜಿಂಕೆಗಳು
ಆನೇಕಲ್‌ ತಾಲ್ಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಂರಕ್ಷಿಸಲಾದ ಜಿಂಕೆಗಳು   

ಆನೇಕಲ್ : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಜಿಂಕೆಗಳ ಸಾವು ಸರಣಿ ಮುಂದುವರಿದಿದೆ. ಬುಧವಾರ ಮತ್ತೆ ಮೂರು ಜಿಂಕೆಗಳು ಸಾವನ್ನಪ್ಪಿವೆ. ವಾರದಿಂದ ಈಚೆಗೆ ಒಟ್ಟು 13 ಜಿಂಕೆಗಳು ಮೃತಪಟ್ಟಿದ್ದು, ಸಾವಿನ ಸಂಖ್ಯೆ 16ಕ್ಕೇರಿದೆ.

’ಬೆಂಗಳೂರಿನ ಸೇಂಟ್‌ ಜಾನ್ಸ್‌ ಆಸ್ಪತ್ರೆ ಉದ್ಯಾನದಿಂದ ತರುವಾಗಲೇ ರಕ್ತಹೀನತೆಯಿಂದ ಬಳಲುತ್ತಿದ್ದವು. ಇಲ್ಲಿ ನೀಡಲಾಗುತ್ತಿರುವ ಆಹಾರಕ್ಕೆ ಹೊಂದಿಕೊಳ್ಳಲು ಪ್ರಯತ್ನ ಮಾಡುತ್ತಿವೆ. ಚಿಕಿತ್ಸೆ ನೀಡಲು ಮುಂದಾದರೆ ಕೆಲವೊಮ್ಮೆ ಹೃದಯಾಘಾತಕ್ಕೆ ಒಳಗಾಗುತ್ತಿವೆ‘ ಎಂದು ಬನ್ನೇರುಘಟ್ಟ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್‌ ತಿಳಿಸಿದರು.

ಜಿಂಕೆಗಳ ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ. ವರದಿ ಬಂದ ನಂತರ ತಜ್ಞರು ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು
ಸೂರ್ಯಸೇನ್, ಕಾರ್ಯನಿರ್ವಾಹಕ ನಿರ್ದೇಶಕ, ಬನ್ನೇರುಘಟ್ಟ ಉದ್ಯಾನ

ನಾಡಿನ ವಾತಾವರಣದಲ್ಲಿ ಬೆಳೆದಿರುವ ಜಿಂಕೆಗಳು, ಕಾಡಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕೆಲ ಸಮಯ ಬೇಕಾಗುತ್ತದೆ. ವೈದ್ಯರು ಮತ್ತು ತಜ್ಞರ ಸಲಹೆಯಂತೆ ಔಷದೋಪಚಾರ ‌ಮುಂದುವರಿದಿದೆ ಎಂದರು.

ADVERTISEMENT

ಗುರುವಾರ ಸಚಿವ ಭೇಟಿ

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಚಿರತೆ ಮತ್ತು ಜಿಂಕೆಗಳ ಸರಣಿ ಸಾವಿನ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ, ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಭೇಟಿ ನೀಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.