ADVERTISEMENT

ಬೆಂಗಳೂರು ಗ್ರಾಮಾಂತರ | ಡೆಂಗಿ: ಆರು ಪ್ರಕರಣ ದೃಢ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 16:11 IST
Last Updated 9 ಜುಲೈ 2024, 16:11 IST
<div class="paragraphs"><p>ಡೆಂಗಿ</p></div>

ಡೆಂಗಿ

   

ದೊಡ್ಡಬಳ್ಳಾಪುರ: ನಗರದ ವಿವಿಧ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆ ಸೇರಿದಂತೆ ಒಟ್ಟು 6 ಡೆಂಗಿ ಪ್ರಕರಣಗಳು ಮಂಗಳವಾರ ದೃಢಪಟ್ಟಿವೆ ಎಂದು ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ರಮೇಶ್‌ ತಿಳಿಸಿದ್ದಾರೆ.

ಈಗಾಗಲೇ ಡೆಂಗಿ ಜ್ವರದ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ರೋಗಿಗಳ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದಿದೆ. ಆದರೆ ಸಾರ್ವಜನಿಕರು ಸೊಳ್ಳೆಗಳ ಕಡಿತದಿಂದ ಸುರಕ್ಷಿತವಾಗಿರಲು ಅಗತ್ಯ ಇರುವ ಮುಂಜಾಗ್ರತ ಕ್ರಮಗಳನ್ನು ವಹಿಸಬೇಕು. ಮನೆಗಳ ಸುತ್ತ ಮುತ್ತ ಮಳೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಸಾಧ್ಯವಾದಷ್ಟು ಬಿಸಿನೀರು ಕುಡಿಯುವ ಕಡೆಗೆ ಆದ್ಯತೆ ನೀಡಬೇಕಿದೆ ಎಂದರು.

ADVERTISEMENT

ಡೆಂಗಿ ನಿಯಂತ್ರಣ ಹಾಗೂ ಇದರ ನಿಯಂತ್ರಣಕ್ಕಾಗಿ ಸರ್ಕಾರಿ ಆಸ್ಪತ್ರೆ ಕಡೆಯಿಂದ ತಾಲ್ಲೂಕಿನಲ್ಲಿ ಕೈಗೊಂಡಿರುವ ಮುಂಜಾಗ್ರತ ಕ್ರಮಗಳು, ಔಷಧಿಯ ದಾಸ್ತಾನು ಹಾಗೂ ಇತರೆ ಮಾಹಿತಿಯನ್ನು ಜನರಿಗೆ ತಿಳಿಸುವಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ನಗರ ಪ್ರದೇಶದಲ್ಲೇ ಡೆಂಗಿ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ನಗರಸಭೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ನಿಯಂತ್ರಣ ಕಾರ್ಯಕ್ರಮಗಳನ್ನು ರೂಪಿಸಬೇಕು. ಸಾರ್ವಜನಿಕರಲ್ಲಿ ಡೆಂಗಿ ಜ್ವರದ ಬಗ್ಗೆ ಇರುವ ಆತಂಕವನ್ನು ದೂರಮಾಡಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.