ಆನೇಕಲ್ : ‘ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ಮಕ್ಕಳು ಸರ್ಕಾರ ಬದಲಾಗಲಿ, ಮಂದಿರವನ್ನು ಒಡೆಯುತ್ತೇವೆ ಎಂಬ ಮಾತುಗಳನ್ನು ಆಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಈ ಪ್ರವೃತ್ತಿಯು ಕೆಲವರ ವಿಕೃತಿ ಪ್ರತೀಕ’ ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ತಿಳಿಸಿದರು.
ತಾಲೂಕಿನ ಬಿದರಗೆರೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಕ್ಕಳಲ್ಲಿ ಮತ್ತು ಯುವಕರಲ್ಲಿ ವಿಕೃತಿ ಮನಸ್ಸು ಕಿತ್ತುಹಾಕಿ ಸಂಸ್ಕೃತಿ ಮೂಡಿಸುವ ಅವಶ್ಯ ಇದೆ. ಹಿಂದೂಗಳು ಜಾಗೃತಾರಾಗುವುದರಿಂದ ಮಾತ್ರ ಮಂದಿರಗಳ ರಕ್ಷಣೆ ಸಾಧ್ಯ. ಹಾಗಾಗಿ ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರಬೇಕು’ ಎಂದರು.
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಜ.22ರಂದು ನಡೆಯಲಿದೆ. ಸಾವಿರಾರರು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಹಾಗಾಗಿ ಪ್ರತಿ ಗ್ರಾಮಗಳಲ್ಲಿಯೂ ಹಬ್ಬದ ವಾತಾವರಣ ನಿರ್ಮಾಣವಾಗಬೇಕು. ಜನರು ತಮ್ಮ ಗ್ರಾಮಗಳಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ರಾಮ ಮಂದಿರದ ಉದ್ಘಾಟನೆಯನ್ನು ಸಂಭ್ರಮಿಸಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.