ವಿಜಯಪುರ(ದೇವನಹಳ್ಳಿ): ಮಾರ್ಚ್ 25 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿಯೊಂದು ಕೊಠಡಿಯಲ್ಲೂ ಸಿ.ಸಿ. ಕ್ಯಾಮೆರಾ ಅಳವಡಿಸಲಾಗುತ್ತಿದೆ.
ಹೋಬಳಿಯಲ್ಲಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರಗತಿ ಪ್ರೌಢಶಾಲೆ, ನಾರಾಯಣಪುರ ಸರ್ಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರವಾಗಿದ್ದು, ನಾಲ್ಕೂ ಕೇಂದ್ರಗಳಲ್ಲಿ ಒಟ್ಟು 941 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲೂ ಕ್ಯಾಮೆರಾ ಜೊತೆಗೆ ಪ್ಯಾನ್ ಅನ್ನು ಅಳವಡಿಸಲಾಗುತ್ತಿದೆ ಎಂದು ಮುಖ್ಯಶಿಕ್ಷಕ ರಾಜು ಹವಳೇಕರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.