ADVERTISEMENT

ಸುಸ್ಥಿರ ಅಭಿವೃದ್ಧಿಗೆ ಸಹಕಾರ ಸಂಘಗಳು ಸಹಕಾರಿ: ಎಸ್‌.ಎಲ್‌. ವೆಂಕಟೇಶ್‌ಬಾಬು

71ನೇ ಅಖಿಲ ಭಾರತ ಸಹಕಾರ ಸಪ್ತಾಹ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2024, 14:52 IST
Last Updated 21 ನವೆಂಬರ್ 2024, 14:52 IST
ದೊಡ್ಡಬಳ್ಳಾಪುರದಲ್ಲಿ ಬುಧವಾರ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024 ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಲಿಯ ಅಧ್ಯಕ್ಷ ಎಸ್‌.ಎಲ್‌‌.ವೆಂಕಟೇಶ್‌ಬಾಬು ಉದ್ಘಾಟಿಸಿದರು
ದೊಡ್ಡಬಳ್ಳಾಪುರದಲ್ಲಿ ಬುಧವಾರ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024 ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಲಿಯ ಅಧ್ಯಕ್ಷ ಎಸ್‌.ಎಲ್‌‌.ವೆಂಕಟೇಶ್‌ಬಾಬು ಉದ್ಘಾಟಿಸಿದರು   

ದೊಡ್ಡಬಳ್ಳಾಪುರ:  ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ. ಸಹಕಾರ ಕ್ಷೇತ್ರ ಸದೃಢವಾಗಲು ಸಂಸ್ಥೆಯ ಬಗ್ಗೆ ಗೌರವ ಇರಬೇಕು. ಸಂಸ್ಥೆಯ ಏಳಿಗೆಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಲಿ ಅಧ್ಯಕ್ಷ ಎಸ್‌.ಎಲ್‌. ವೆಂಕಟೇಶ್‌ಬಾಬು ಹೇಳಿದರು.

ನಗರದ ಬಮೂಲ್‌ ದೊಡ್ಡಬಳ್ಳಾಪುರ ಶಿಬಿರ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಒಕ್ಕೂಟ ಬಮೂಲ‌, ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕ ಸಹಕಾರ ಸಂಘಗಳು ಮತ್ತು ವ್ಯವಸಾಯ ಸೇವಾ ಸಹಕಾರ ಸಂಘಗಳ ಸಹಯೋಗದಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಅಭಿವೃದ್ಧಿಗೆ ಸಹಕಾರ ಸಂಘಗಳ ಪಾತ್ರ ಮಹತ್ವದ್ದಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಸಹಕಾರ ಕ್ಷೇತ್ರದಲ್ಲಿ ತಂತ್ರಜ್ಞಾನ, ಅನ್ವೇಷಣೆ ಹಾಗೂ ಉತ್ತಮ ಆಡಳಿತಕ್ಕೆ ಒತ್ತು ನೀಡಬೇಕಾದ ಅಗತ್ಯವಿದೆ. ಸಹಕಾರ ಸಂಘವನ್ನು ಗೌರವಿಸಬೇಕು. ಸಹಕಾರ ಸಂಘದಲ್ಲಿ ಎಲ್ಲಾ ಕೆಲಸಗಳನ್ನು ತನ್ನ ಸ್ವಂತ ಕೆಲಸದಂತೆ ಭಾವಿಸಿ ಕರ್ತವ್ಯ ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ADVERTISEMENT

ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಆವತಿ ಎ.ಸಿ.ನಾಗರಾಜ್‌, ಬಹಳಷ್ಟು ಸಹಕಾರ ಸಂಘಗಳು ಹಾಲು ಉತ್ಪಾದಕರ ಸಹಕಾರ ಸಂಘಗಳೇ ಆಗಿವೆ. ಕೈಗಾರಿಕೆಗಳ ಪ್ರಭಾವದಿಂದ ಹೈನುಗಾರಿಕೆ ಕ್ಷೀಣಿಸುತ್ತಿದೆ. ಹಾಲಿನ ಉತ್ಪಾದನೆ ಸಹ ಕಡಿಮೆ ಆಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಟಿಎಪಿಸಿಎಂಎಸ್‌ ನಿರ್ದೇಶಕ ವಿ.ಆಂಜನೇಗೌಡ, ಶೇ 70 ರಷ್ಟು ಜನ ದೇಶದ ಗ್ರಾಮೀಣ ಪ್ರದೇಶದಲ್ಲಿ ಜೀವನ ಮಾಡುತ್ತಿದ್ದಾರೆ. ಇವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಬೇಕಾದರೆ ಸಹಕಾರ ಸಂಘ ಸಂಸ್ಥೆಗಳನ್ನು ಉಳಿಸಿ ಬೆಳೆಸಬೇಕಾಗಿದೆ ಎಂದರು.

ದೊಡ್ಡಬಳ್ಳಾಪುರ ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕ ರಾಮಾಂಜಿನಯ್ಯ, ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಬಿ.ಟಿ.ಶ್ರೀನಿವಾಸಮೂರ್ತಿ, ನಿರ್ದೇಶಕ ಡಿ.ಸಿದ್ದರಾಮಯ್ಯ, ಟಿಎಪಿಸಿಎಂಎಸ್‌ ಅಧ್ಯಕ್ಷ ಜಿ.ಮಾರೇಗೌಡ, ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಎಲ್‌.ಬಿ.ನಾಗರಾಜ್, ಹಾಲು ಉತ್ಪಾದಕ ಸಹಕಾರ ಸಂಘಗಳ ನೌಕರರ ಹಿತರಕ್ಷಣ ಸಮಿತಿ ಅಧ್ಯಕ್ಷ ಬಿ ರವೀಂದ್ರಕುಮಾರ್‌, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ಪಿ.ಪುರುಷೋತ್ತಮ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.