ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಮೇಶ್ವರ ಗೇಟ್ ಬಳಿ ಸೋಮವಾರ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ರಾಮೇಶ್ವರ ಗ್ರಾಮದ ನಿವಾಸಿ ಮರಿಯಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಇವರ ಮಗ ಆನಂದ್ ಸಣ್ಣಪುಟ್ಟ ಗಾಯವಾಗಿದೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಠಾಣೆ ಪೊಲೀಸರು ಭೇಟಿ ನೀಡಿದ್ದು ದೂರು ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.