ADVERTISEMENT

ಪಾರದರ್ಶಕತೆ ಕಾಪಾಡಲು ಮಹಾಸಭೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 13:23 IST
Last Updated 24 ಸೆಪ್ಟೆಂಬರ್ 2019, 13:23 IST
ಸೂಲಿಬೆಲೆ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಗಣ್ಯರು ಉದ್ಘಾಟಿಸಿದರು
ಸೂಲಿಬೆಲೆ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಗಣ್ಯರು ಉದ್ಘಾಟಿಸಿದರು   

ಸೂಲಿಬೆಲೆ: ಸಹಕಾರ ಸಂಘಗಳ ವಾರ್ಷಿಕ ಮಹಾಸಭೆಗಳ ಉದ್ದೇಶ ಆಡಳಿತದಲ್ಲಿ ಪಾರದರ್ಶಕತೆಯನ್ನು ಕಾಪಾಡುವುದಕ್ಕೆ ಸಹಕಾರಿಯಾಗಲಿದೆ ಎಂದು ಹೊಸಕೋಟೆ ಹೊಸಕೋಟೆ ಟಿ.ಎ.ಪಿ.ಸಿ.ಎಂ.ಎಸ್ ಉಪಾಧ್ಯಕ್ಷ ಬಿ.ಎನ್. ಗೋಪಾಲಗೌಡ ಹೇಳಿದರು.

ಸೂಲಿಬೆಲೆ ರೇಷ್ಮೆ ಇಲಾಖೆ ಬಳಿ ಇರುವ ಸಮುದಾಯ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.

ಷೇರುದಾರರ ಬೆಂಬಲದಿಂದ ನಡೆಯುವಂತ ಸಹಕಾರ ಸಂಘಗಳು ಜನರ ಅಭಿಪ್ರಾಯಗಳನ್ನು ಪಡೆದು ನಡೆಯುವಂತಹದಾಗಿದ್ದು ಸಾರ್ವಜನಿಕರ ಅಭಿಪ್ರಾಯಕ್ಕೆ ಮಾನ್ಯತೆಯನ್ನು ನೀಡುವಂತಾದ್ದಾಗಿವೆ. ಸಹಕಾರ ಎಂದರೆ ಪರಸ್ಪರರ ಏಳಿಗೆಗಾಗಿ ಮತ್ತು ಸಮಾಜದ ಅಭಿವೃದ್ಧಿಗಾಗಿ, ಕಷ್ಟದಲ್ಲಿದ್ದವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ಎಂದರು.

ADVERTISEMENT

ಬ್ಯಾಂಕ್ ನಿರ್ದೇಶಕ ಬಿ.ತಮ್ಮೇಗೌಡ ಮಾತನಾಡಿ, ‘1976ರಲ್ಲಿ ಪ್ರಾರಂಭವಾದ ಸಂಘ ಉತ್ತಮವಾದ ಆಡಳಿತ ನಡೆಸಿಕೊಂಡು ಬಂದಿದ್ದು, 2018-19 ನೇ ಸಾಲಿನಲ್ಲಿ ₹ 45.62 ಲಕ್ಷ ಲಾಭ ಗಳಿಸಿದೆ’ ಎಂದರು.

ಸಹಕಾರ ಬ್ಯಾಂಕ್ ನ ಅಧ್ಯಕ್ಷ ಬಿ.ವಿ. ಸತೀಶ್ ಗೌಡ ಅವರ ಅಧ್ಯಕ್ಷತೆಯಲ್ಲಿ, ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಸೂ.ರಂ.ರಾಮಯ್ಯ ಅವರ ಉಪಸ್ಥಿತಿಯಲ್ಲಿ ವಾರ್ಷಿಕ ಮಹಾಸಭೆ ನಡೆಯಿತು.

ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಶೇ 75 ಕ್ಕಿಂತ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು. ವಾರ್ಷಿಕ ವರದಿಯನ್ನು ಎ.ಎಂ. ಶ್ರೀನಿವಾಸಮೂರ್ತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ 2018-19 ನೇ ಸಾಲಿನ ವರದಿ ಮಂಡಿಸಿದರು.

ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಅಬ್ದುಲ್ ವಾಜಿದ್, ನಿರ್ದೇಶಕರುಗಳಾದ ನಾರಾಯಣಪ್ಪ, ಅಣ್ಣೇಪ್ಪ, ಶ್ರೀಮತಿ ಪಾರ್ವತಮ್ಮ ನಾಗರಾಜ್, ಶ್ರೀಮತಿ ಜೆ.ಆರ್. ಲೀಲಾವತಿ, ಸೈಯದ್ ಜಿಯಾಉಲ್ಲಾ, ಗ್ರಾಮದ ಹಿರಿಯ ಮುಖಂಡರಾದ ಪುಟ್ಟಸ್ವಾಮಪ್ಪ, ಸಿಬ್ಬಂದಿ ವರ್ಗ, ಸದಸ್ಯರು ಹಾಗೂ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.