ADVERTISEMENT

7ನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹ: ಸರ್ಕಾರಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 14 ಜುಲೈ 2024, 15:58 IST
Last Updated 14 ಜುಲೈ 2024, 15:58 IST
ದೊಡ್ಡಬಳ್ಳಾಪುರ ಶಾಸಕ ಧೀರಜ್‌ ಮುನಿರಾಜ್‌ ಅವರಿಗೆ ತಾಲ್ಲೂಕು ಸರ್ಕಾರಿ ನೌಕರರ ಸಂಘ, ಶಿಕ್ಷಣ ಇಲಾಖೆಯ ವಿವಿಧ ಸಂಘದಿಂದ 7ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ದೊಡ್ಡಬಳ್ಳಾಪುರ ಶಾಸಕ ಧೀರಜ್‌ ಮುನಿರಾಜ್‌ ಅವರಿಗೆ ತಾಲ್ಲೂಕು ಸರ್ಕಾರಿ ನೌಕರರ ಸಂಘ, ಶಿಕ್ಷಣ ಇಲಾಖೆಯ ವಿವಿಧ ಸಂಘದಿಂದ 7ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.   

ದೊಡ್ಡಬಳ್ಳಾಪುರ:  ಏಳನೇ ವೇತನ ಆಯೋಗ ವರದಿ ಜಾರಿ, ಹಳೆ ಪಿಂಚಣಿ ಯೋಜನೆ ಮತ್ತು ನಗದು ರಹಿತ ವೈದ್ಯಕೀಯ ಸೇವೆ ಜಾರಿಗೆ ಒತ್ತಾಯಿಸಿ ತಾಲ್ಲೂಕು ಸರ್ಕಾರಿ ಸಂಘ, ಶಿಕ್ಷಣ ಇಲಾಖೆಯ ವಿವಿಧ ಸಂಘಗಳ ಪದಾಧಿಕಾರಿಗಳು ಮತ್ತು ನೌಕರರು ಶಾಸಕ‌ ಧೀರಜ್ ಮುನಿರಾಜ್‌, ತಾಲ್ಲೂಕು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ವೇತನ ಆಯೋಗ ರಚನೆಯಾಗಿ 19 ತಿಂಗಳು ಕಳೆದಿದೆ. ಕರ್ನಾಟಕ ರಾಜ್ಯ ನೌಕರರ ಸ‌ಮ್ಮೇಳನದದಲ್ಲಿ ಮುಖ್ಯಮಂತ್ರಿಗಳು ನೀಡಿದ್ದ ವರದಿ ಅನುಷ್ಠಾನದ ಭರವಸೆ ಇನ್ನೂ ಈಡೇರಿಲ್ಲ. ರಾಜ್ಯ ಸರ್ಕಾರ ಕೂಡಲೇ 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಪದಾಧಿಕಾರಿಗಳು ಒತ್ತಾಯಿಸಿದರು.

7ನೇ ವೇತನ ಆಯೋಗದ ವರದಿ ಜಾರಿ ಜೊತೆಗೆ ಎನ್‌ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದರು.

ADVERTISEMENT

ಮನವಿ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಲಕ್ಷ್ಮೀನರಸಿಂಹಯ್ಯ, ಕಾರ್ಯದರ್ಶಿ ಶ್ರೀನಿವಾಸ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ಶಿಕ್ಷಕರ ಮತ್ತು ಉಪನ್ಯಾಸಕರ ಸಂಘಗಳ ಪದಾಧಿಕಾರಿಗಳು ಮತ್ತು ನೌಕರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.