ADVERTISEMENT

ಡೆಂಗಿ: ವಿದ್ಯಾರ್ಥಿಗಳ ಬೀದಿ ನಾಟಕ ಜಾಗೃತಿ

​ಪ್ರಜಾವಾಣಿ ವಾರ್ತೆ
Published 20 ಜುಲೈ 2024, 13:28 IST
Last Updated 20 ಜುಲೈ 2024, 13:28 IST
ವಿಜಯಪುರದಲ್ಲಿ ಶಾಲೆ ವಿದ್ಯಾರ್ಥಿಗಳು ಡೆಂಗಿ ಹರಡದಂತೆ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಿದರು
ವಿಜಯಪುರದಲ್ಲಿ ಶಾಲೆ ವಿದ್ಯಾರ್ಥಿಗಳು ಡೆಂಗಿ ಹರಡದಂತೆ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಿದರು   

ವಿಜಯಪುರ(ದೇವನಹಳ್ಳಿ): ಪಟ್ಟಣದ ಎವರ್ ಗ್ರೀನ್ ಶಾಲೆ ವಿದ್ಯಾರ್ಥಿಗಳು ಡೆಂಗಿ ಹರಡದಂತೆ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಕೈಗೊಂಡರು.

ಡೆಂಗಿ ಹರಡದಂತೆ ಜಾಗೃತಿ ಬರಹದ ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದರು. ಪಟ್ಟಣದ ಬಸ್ ನಿಲ್ದಾಣ ಹಾಗೂ ಗಾಂಧಿಚೌಕದಲ್ಲಿ ಬೀದಿನಾಟಕ ಮೂಲಕ ಜಾಗೃತಿ ಮೂಡಿಸಿದರು.

ಶಾಲೆ ಮುಖ್ಯಶಿಕ್ಷಕಿ ಆರ್.ಸವಿತಾ ಮಾತನಾಡಿ, ಈಚೆಗೆ ಡೆಂಗಿ ಪ್ರಕರಣಗಳು ಹೆಚ್ಚುತ್ತಿವೆ. ಜನರು ಈ ರೋಗದಿಂದ ಬಳಲುತ್ತಿದ್ದಾರೆ. ಇಂತಹ ಸಮಯದಲ್ಲಿ ಪ್ರತಿಯೊಬ್ಬರನ್ನು ಜಾಗೃತಗೊಳಿಸಬೇಕಾಗಿರುವುದು ಎಲ್ಲರ ಜವಾಬ್ದಾರಿ ಎಂದರು.

ADVERTISEMENT

ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಸೊಳ್ಳೆ ಪರದೆ ಉಪಯೋಗಿಸಬೇಕು. ಸ್ವಯಂ ಚಿಕಿತ್ಸೆ ಬದಲಿಗೆ ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಡೆಂಗಿ ಹರಡದಂತೆ ಜಾಗೃತಿ ವಹಿಸಬೇಕು ಎಂದರು. ‌

ವೇದಗಾನ ಎಜುಕೇಷನ್ ಟ್ರಸ್ಟ್ ರುದ್ರಮೂರ್ತಿ, ಶಿಕ್ಷಕರಾದ ಆವಲಕೊಂಡರಾಯರೆಡ್ಡಿ, ರಮ್ಯಾ, ಗಣಕಯಂತ್ರ ವಿಭಾಗದ ರುದ್ರೇಶ್. ಪ್ರಭಾವತಿ, ಚೈತ್ರಾ, ಗಾನವಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.