ADVERTISEMENT

ದೇವನಹಳ್ಳಿ: ಭೂಸ್ವಾಧೀನ ಕೈಬಿಡಲು ಸಚಿವರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 16 ಜೂನ್ 2024, 15:58 IST
Last Updated 16 ಜೂನ್ 2024, 15:58 IST
ದೇವನಹಳ್ಳಿಯ ಬೀರಸಂದ್ರದಲ್ಲಿರುವ ಜಿಲ್ಲಾಡಳಿತ ಭವನದ ಬಳಿ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ವಿರೋಧಿ ಹೋರಾಟದ ಸದ್ಯರು ಭೂ ಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿದರು
ದೇವನಹಳ್ಳಿಯ ಬೀರಸಂದ್ರದಲ್ಲಿರುವ ಜಿಲ್ಲಾಡಳಿತ ಭವನದ ಬಳಿ ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ವಿರೋಧಿ ಹೋರಾಟದ ಸದ್ಯರು ಭೂ ಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿದರು   

ದೇವನಹಳ್ಳಿ: ಕೈಗಾರಿಕೆ ಅಭಿವೃದ್ಧಿಗೆ ಕೃಷಿಭೂಮಿ ಸ್ವಾಧೀನ ವಿರೋಧಿಸಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರು ಕಳೆದ 804 ದಿನದಿಂದ ಹೋರಾಟ ನಡೆಸುತ್ತಿರುವ ರೈತರು, ಶನಿವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌. ಮುನಿಯಪ್ಪ ಅವರಿಗೆ ರೈತರು ಭೂಸ್ವಾಧೀನ ಕೈಬಿಡುವಂತೆ ಮನವಿ ಸಲ್ಲಿಸಿದರು.

ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ನಾನಾ ಗ್ರಾಮಗಳ ರೈತರು 804 ದಿನಗಳಿಂದ ಕೃಷಿ ಭೂಮಿ ಉಳಿಗಾಗಿ ಹೋರಾಟ ಮಾಡುತ್ತಿದ್ದಾರೆ. ಈ ಭಾಗದ 1,777 ಎಕರೆ ಕೃಷಿ ಭೂಮಿಯನ್ನು ಕೈಗಾರಿಕೆ ಪ್ರದೇಶದ ಅಭಿವೃದ್ಧಿ ಭೂಸ್ವಾಧೀನ ಪಡಿಸಿಕೊಳ್ಳಲು ಕೆಐಎಡಿಬಿ ಮುಂದಾಗಿದೆ. ಆದರೆ, ಯಾವುದೇ ಕಾರಣಕ್ಕೂ ಭೂಮಿ ಕೊಡುವುದಿಲ್ಲ, ಯಾರು ಭೂಮಿ ಕೊಡುತ್ತಾರೋ ಅವರಿಂದ ಭೂಮಿ ಪಡೆದುಕೊಳ್ಳಲಿ. ಈ ಭಾಗದಲ್ಲಿನ ರೈತರು ಯಾರು ಭೂಮಿ ನೀಡುವುದಿಲ್ಲ ಎಂದು ರೈತ ಮುಖಂಡ ಶ್ರೀನಿವಾಸ್ ಸ್ಪಷ್ಟಪಡಿಸಿದರು.

ರೈತರ ಮನವಿ ಆಲಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ, ಚನ್ನರಾಯಪಟ್ಟಣದ ರೈತರ ಹೋರಾಟದ ಸಂಬಂಧ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುತ್ತದೆ. ಜತೆಗೆ ಅವರ ಸಮಯ ಪಡೆದು ರೈತರೊಂದಿಗೆ ಸಭೆ ನಡೆಸಲು ಕೂಡ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.