ADVERTISEMENT

ದೇವನಹಳ್ಳಿ ಪುರಸಭೆ ವಾರ್ಡ್‌ಗಳಲ್ಲಿ ಸೌಲಭ್ಯ ಕಲ್ಪಿಸಲು ಆಗ್ರಹ

ಸೌಲಭ್ಯ

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 14:39 IST
Last Updated 25 ಜೂನ್ 2024, 14:39 IST
ದೇವನಹಳ್ಳಿ ಪುರಸಭೆಯಲ್ಲಿ ನಡೆದ ಸದಸ್ಯರ ಸಮಾಲೋಚನ ಸಭೆಯಲ್ಲಿ ಭಾಗವಹಿಸಿದ್ದ ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳು
ದೇವನಹಳ್ಳಿ ಪುರಸಭೆಯಲ್ಲಿ ನಡೆದ ಸದಸ್ಯರ ಸಮಾಲೋಚನ ಸಭೆಯಲ್ಲಿ ಭಾಗವಹಿಸಿದ್ದ ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳು    

ದೇವನಹಳ್ಳಿ: ಪುರಸಭೆ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಕುಡಿಯುವ ನೀರು, ಸ್ವಚ್ಛತೆ ಹಾಗೂ ಬೀದಿದೀಪ ದುರಸ್ತಿ ಸೇರಿದಂತೆ ಸಮರ್ಪಕವಾಗಿ ನಿರ್ವಹಣೆ ಮಾಡಿ ಸಾರ್ವಜನಿಕರಿಗೆ ಮೂಲ ಸೌಲಭ್ಯ ಕಲ್ಪಿಸಿ ಎಂದು ಪುರಸಭೆ ಆಡಳಿತಾಧಿಕಾರಿ ಶ್ರೀನಿವಾಸ್‌ ತಿಳಿಸಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ಸದಸ್ಯರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.

ನೀರಿನ ಪೈಪ್‌ಲೈನ್‌ ಹಾಗೂ ಕೆಲವಡೆ ಸಾರ್ವಜನಿಕರಿಗೆ ತೊಂದರೆಯಾಗುವ ಹಳೆ  ಮರಗಳನ್ನು ತೆರವುಗೊಳಿಸಲು ತಿಳಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ತುರ್ತಾಗಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಹಳೆ ಬಸ್‌ ನಿಲ್ದಾಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಹರಾಜು ಕಟ್ಟೆ ಬಳಕೆಯಾಗದೆ ಇದ್ದು ಬೀದಿಬದಿ ವ್ಯಪಾರಿಗಳಿಗೆ ಸ್ಥಳಾವಕಾಶ ಕಲ್ಪಿಸಬೇಕೆಂದು ನಿರ್ದೇಶನ ನೀಡಿದರು.

ಪುರಸಭೆ ಸದಸ್ಯ ಜಿ.ಎ.ರವೀಂದ್ರ ಮಾತನಾಡಿ, ಹಳೆ ಬಸ್‌ ನಿಲ್ದಾಣ ಬಳಿ ಬುಧವಾರ ಹಾಗೂ ಭಾನುವಾರ ಸಂತೆ ನಡೆಯುತ್ತದೆ. ಬಿ.ಬಿ ರಸ್ತೆಯಲ್ಲಿ ಅಂಗಡಿ ಹಾಗೂ ತಳ್ಳುವ ಬಂಡಿಗಳು ರಸ್ತೆಯಲ್ಲಿ ಇಡುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ದೊಡ್ಡಮಲವಯ್ಯ, ವ್ಯವಸ್ಥಾಪಕಿ ಸರಸ್ವತಿ, ಕಂದಾಯ ಅಧಿಕಾರಿ ಶಿವಮೂರ್ತಿ, ಕಂದಾಯ ನಿರೀಕ್ಷಕ ಎ.ಮಂಜುನಾಥ್, ಪರಿಸರ ಎಂಜಿನಿಯರ್ ಲೋಹಿತ್, ಹಿರಿಯ ಆರೋಗ್ಯ ನಿರೀಕ್ಷಕಿ ಶ್ರೀದೇವಿ, ಸಮುದಾಯ ಸಂಘಟನೆ ಅಧಿಕಾರಿ ಬೈರಪ್ಪ, ಎಂಜಿನಿಯರ್‌ ಗಜೇಂದ್ರ, ದ್ವಿತೀಯ ದರ್ಜೆ ಸಹಾಯಕ ಮಂಜಪ್ಪ, ಶ್ರೀನಿವಾಸ್, ಮಂಜುನಾಥ್, ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.