ADVERTISEMENT

ಜಾಲಿಗೆ: ಮಕ್ಕಳ ಗ್ರಾಮ ಸಭೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2024, 15:59 IST
Last Updated 14 ನವೆಂಬರ್ 2024, 15:59 IST
ದೇವನಹಳ್ಳಿಯ ಜಾಲಿಗೆ ಗ್ರಾ.ಪಂ ಆವರಣಲದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳ ಗ್ರಾಮ ಸಭೆ ನಡೆಯಿತು
ದೇವನಹಳ್ಳಿಯ ಜಾಲಿಗೆ ಗ್ರಾ.ಪಂ ಆವರಣಲದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳ ಗ್ರಾಮ ಸಭೆ ನಡೆಯಿತು   

ದೇವನಹಳ್ಳಿ: ತಾಲ್ಲೂಕಿನ ಕುಂದಾಣ ಹೋಬಳಿಯ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ ಮಕ್ಕಳ ಗ್ರಾಮ ಸಭೆ ನಡೆಯಿತು.

ಜಾಲಿಗೆ ಗ್ರಾ.ಪಂ ಪಿಡಿಒ ಪ್ರಕಾಶ್‌ ಮಾತನಾಡಿ, ಸಂವಿಧಾನ ಮೂಲ ಆಶಯದಂತೆ ಸ್ಥಳೀಯ ಸರ್ಕಾರಗಳು ಸ್ಥಾಪಿತವಾಗಿದ್ದು, ಗ್ರಾಮ ಪಂಚಾಯಿತಿಗಳು ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಸ್ಥಾಪಿತವಾದ ಸ್ವತಂತ್ರ ಕಚೇರಿಗಳಾಗಿದ್ದು, ಇಲ್ಲಿಗೆ ಮಕ್ಕಳು ಸಹ ಬಂದು ಸೌಲಭ್ಯ ಪಡೆಯಬಹುದು ಎಂದು ಹೇಳಿದರು.

ವಿದ್ಯಾರ್ಥಿಗಳು ನೀವು ಓದುವ ಶಾಲೆ ಅಥವಾ ವಾಸಿಸುವ ಸ್ಥಳದಲ್ಲಿ ಅಗತ್ಯ ಮೂಲಭೂತ ಸೌಲಭ್ಯಕ್ಕಾಗಿ ಗ್ರಾಪಂ ಸಂಪರ್ಕಿಸಬಹುದು ಎಂದು ತಿಳಿಸಿದರು.

ADVERTISEMENT

ಗ್ರಾಮ ಪಂಚಾಯಿತಿಯಲ್ಲಿರುವ ರೋಜ್‌ಗಾರ್‌ ಯೋಜನೆಯ ಮೂಲಕ ಕ್ರೀಡಾಂಗಣ ಸ್ಥಾಪನೆಗೆ ಅವಕಾಶವಿದೆ. ಸರ್ಕಾರಿ ಶಾಲೆಗಳಿಗೆ ಅಗಗತ್ಯ ವಿರುವ ಕುಡಿಯುವ ನೀರು, ಶೌಚಾಲಯ ಸೇರಿದಂತೆ ತಡೆಗೋಡೆಯನ್ನು ಪಂಚಾಯಿತಿಯಿಂದ ನಿರ್ಮಿಸಬಹುದು ಎಂದು ತಿಳಿಸಿದರು.

ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಸರ್ಕಾರವೂ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿಯೂ ಸುಸ್ಸಜ್ಜಿತ ಗ್ರಂಥಾಲಯ ಸ್ಥಾಪನೆ ಮಾಡಿದೆ. ಇಲ್ಲಿ ಕಂಪ್ಯೂಟರ್‌ಗಳು ಲಭ್ಯವಿದ್ದು, ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಸಹಕಾರಿಯಾಗಲಿದೆ ಎಂದರು.

ಜಾಲಿಗೆ ಗ್ರಾ.ಪಂ ಅಧ್ಯಕ್ಷ ಎಸ್‌.ಎಂ.ಆನಂದ್‌ ಕುಮಾರ್‌ ಮಾತನಾಡಿ, ಸರ್ಕಾರದ ಮಹತ್ತರ ಯೋಜನೆಗಳು ಗ್ರಾಮೀಣ ಭಾಗಕ್ಕೂ ಸಂಪೂರ್ಣವಾಗಿ ಅನುಷ್ಠಾನವಾಗಲೇಂದು ಗ್ರಾಮ ಪಂಚಾಯಿತಿಗಳು ಕೆಲಸ ಮಾಡುತ್ತಿದೆ ಎಂದರು.

ಮಕ್ಕಳು ಚಿಕ್ಕ ವಯಸ್ಸಿನಲ್ಲಿಯೇ ಸ್ವಾತಂತ್ರ್ಯ ಹೋರಾಟಗಾರರ ಸ್ಪೂರ್ತಿ ಪಡೆದು, ರಾಜಕೀಯ ಕ್ಷೇತ್ರದಲ್ಲಿ ಜನರ ಸೇವೆ ಮಾಡುವ ಉದ್ದೇಶವಿಟ್ಟುಕೊಂಡು ಬರಬೇಕು. ಯುವಕರಿಂದ ಮಾತ್ರವೇ ದೇಶದ ಪ್ರಗತಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಜಾಲಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮ ಪಂಚಾಯಿತಿ ಕಾರ್ಯಾಲಯದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.