ADVERTISEMENT

ದ.ಭಾರತದ ಪ್ರಮುಖ ವಾಯುಯಾನ ಕೇಂದ್ರವಾಗಿ ಕೆಐಎ

ಏರ್‌ ಇಂಡಿಯಾ ಜತೆ ಒಪ್ಪಂದ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2024, 8:24 IST
Last Updated 9 ಏಪ್ರಿಲ್ 2024, 8:24 IST
ದೇವನಹಳ್ಳಿಯ ಕೇಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರೀಮಿಯರ್‌ ಏವಿಯೇಷನ್‌ ಹಬ್ ಆಗಿ ಅಭಿವೃದ್ಧಿಪಡಿಸಲು ಒಪ್ಪಂದಕ್ಕೆ ಸಹಿ ಹಾಕಿದ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಏರ್ ಇಂಡಿಯಾದ ಮುಖ್ಯಸ್ಥರು. 
ದೇವನಹಳ್ಳಿಯ ಕೇಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರೀಮಿಯರ್‌ ಏವಿಯೇಷನ್‌ ಹಬ್ ಆಗಿ ಅಭಿವೃದ್ಧಿಪಡಿಸಲು ಒಪ್ಪಂದಕ್ಕೆ ಸಹಿ ಹಾಕಿದ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಏರ್ ಇಂಡಿಯಾದ ಮುಖ್ಯಸ್ಥರು.    

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು (ಕೆಐಎ) ದಕ್ಷಿಣ ಭಾರತದ ಪ್ರಮುಖ ವಾಯುಯಾನ ಕೇಂದ್ರವಾಗಿ (ಪ್ರೀಮಿಯರ್‌ ಏವಿಯೇಷನ್‌ ಹಬ್) ಅಭಿವೃದ್ಧಿ ಪಡಿಸಲು ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಸೋಮವಾರ ಏರ್‌ ಇಂಡಿಯಾ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.

ಈ ಕುರಿತು ಮಾತನಾಡಿದ ಏರ್ ಇಂಡಿಯಾದ ಮುಖ್ಯಸ್ಥ ಕ್ಯಾಂಪ್‌ಬೆಲ್ ವಿಲ್ಸನ್, ವಿಮಾನ ನಿಲ್ದಾಣದಲ್ಲಿ ದಕ್ಷ ಹಾಗೂ ಸುರಕ್ಷಿತ  ಕಾರ್ಯಾಚರಣೆ ನಡೆದರೆ ಗ್ರಾಹಕರಿಗೆ ಉತ್ತಮ ಅನುಭವ ಸಿಗಲಿದೆ. ಇದನ್ನು ಗುರಿಯಾಗಿಸಿಕೊಂಡು ವಾಯು ಸಂಪರ್ಕ ವಿಸ್ತರಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಕೆಐಎ ಸಿಇಓ ಹರಿ ಮರಾರ್‌ ಮಾತನಾಡಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ದಕ್ಷಿಣ ಭಾರತದಲ್ಲಿಯೇ ಅತಿ ಹೆಚ್ಚು ಪ್ರಯಾಣಿಕರು ಪ್ರಯಾಣಿಸುವ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ ಹೊಂದಿದೆ. ಈ ಒಪ್ಪಂದದೊಂದಿಗೆ ವಿಶ್ವದ ವಿವಿಧ ಮಹಾನಗರಗಳಿಗೆ ನೇರ ವಿಮಾನ ಸಂಪರ್ಕ ಸಾಧ್ಯವಾಗಲಿದೆ. ಜತೆಗೆ ಪ್ರಯಾಣಿಕರಿಗೆ ಉತ್ತಮ ಪ್ರಯಾಣದ ಅನುಭವ ದೊರೆಯಲಿದೆ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.