ದೊಡ್ಡಬಳ್ಳಾಪುರ:ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ ಗುರುತೇಜ್ ಬಹದ್ದೂರ್ ದಿನಾಚರಣೆ ಅಂಗವಾಗಿ ನಡೆದ ಜಿಲ್ಲಾಮಟ್ಟದ ಸೃಜನಶೀಲ ಬರವಣಿಗೆ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ಅರಳುಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಿ. ಹೇಮಲತಾ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯನ್ನು ಮುಖ್ಯಶಿಕ್ಷಕ ಎಚ್.ಎನ್. ಪ್ರಕಾಶ್, ಶಾಲಾ ಶೈಕ್ಷಣಿಕ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.