ADVERTISEMENT

ದೊಡ್ಡಬಳ್ಳಾಪುರ: ಈಜಲು ತೆರಳಿದ್ದ ಯುವಕ ನೀರುಪಾಲು

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2024, 16:18 IST
Last Updated 6 ನವೆಂಬರ್ 2024, 16:18 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕರಾಯಪ್ಪನಹಳ್ಳಿ ಗೌಡನಕೆರೆಯಲ್ಲಿ ಈಜಲು ಹೋಗಿದ್ದ ಯುವಕನಿಗಾಗಿ ಹುಡುಕಾಟ ನಡೆಸುತ್ತಿರುವ ಅಗ್ನಿಶಾಮಕದಳದ ಸಿಬ್ಬಂದಿ
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕರಾಯಪ್ಪನಹಳ್ಳಿ ಗೌಡನಕೆರೆಯಲ್ಲಿ ಈಜಲು ಹೋಗಿದ್ದ ಯುವಕನಿಗಾಗಿ ಹುಡುಕಾಟ ನಡೆಸುತ್ತಿರುವ ಅಗ್ನಿಶಾಮಕದಳದ ಸಿಬ್ಬಂದಿ   

ದೊಡ್ಡಬಳ್ಳಾಪುರ: ತಾಲ್ಲೂಕಿನ ಪಂಚಗಿರಿ ಶ್ರೇಣಿಯಲ್ಲಿನ ಚಿಕ್ಕರಾಯಪ್ಪನಹಳ್ಳಿ ಗೌಡನಕೆರೆಯಲ್ಲಿ ಬುಧವಾರ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿದ್ದಾರೆ.

ನೀರಿನಲ್ಲಿ ಮುಳುಗಿದ ಯುವಕನನ್ನು ಲಘುಮೇನಹಳ್ಳಿ ಗ್ರಾಮದ ನಿವಾಸಿ ಶ್ರೀನಿವಾಸ್ (21)ಎಂದು ಗುರುತಿಸಲಾಗಿದೆ. ಯುವಕನ ಪತ್ತೆಯಾಗದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಹುಡುಕಾಟ ನಡೆಸಿದ್ದಾರೆ. ಯುವಕ ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಕಾಲೇಜಿ
ನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು ಬುಧವಾರ ಸ್ನೇಹಿತ
ರೊಂದಿಗೆ ಈಜಲು ಕೆರೆಗೆ ಹೋಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ‌

ಕೆರೆಯಲ್ಲಿ ಹೆಚ್ಚಿನ ನೀರು ಇದೆ. ಕತ್ತಲಾಗಿದ್ದರಿಂದ ಅಗ್ನಿಶಾಮಕದಳದ ಸಿಬ್ಬಂದಿ ಹುಡುಕಾಟ ನಿಲ್ಲಿಸಿದ್ದು, ಗುರುವಾರ ಮತ್ತೆ ಪ್ರಾರಂಭ ಮಾಡುವುದಾಗಿ ಮಾಹಿತಿ ನೀಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.