ದೊಡ್ಡಬಳ್ಳಾಪುರ: ದೇವನಹಳ್ಳಿ ರಸ್ತೆಯ ರಘುನಾಥಪುರ ಸಮೀಪ ಶನಿವಾರ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಗರದ ರೈಲು ನಿಲ್ದಾಣ ನಿವಾಸಿ ಹೇಮ(28) ಮೃತರು. ಅಪಘಾತದಲ್ಲಿ ಈಕೆಯ ಪತಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೀತಂ ಯೂನಿವರ್ಸಿಟಿ ಬಳಿ ಚಿಲ್ಲರೆ ಅಂಗಡಿ ನಡೆಸುತ್ತಿದ್ದ ದಂಪತಿ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಕಾರಿನ ಚಾಲಕ ಬೆಂಗಳೂರು ಮೂಲದ ಕಿರಣ್ ಎಂಬುವವರು ಫಾಕ್ಸಾಕಾನ್ ಕಂಪನಿಯಲ್ಲಿ ಕಾರ್ಯನಿರ್ವಹಿಸಿ ತೆರಳುವಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಸಾಧಿಕ್ ಪಾಷಾ ತಿಳಿಸಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.