ದೊಡ್ಡಬಳ್ಳಾಪುರ: ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ₹1.7 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಧೀರಜ್ ಮುನಿರಾಜ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಸ್ಥಳೀಯ ಸಂಸ್ಥೆಗಳ ಮೂಲಕ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ರಸ್ತೆ, ಬೀದಿದೀಪ, ಚರಂಡಿ ಸೇರಿದಂತೆ ಆದ್ಯತಾವಾರು ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗಿದೆ ಎಂದರು.
ಕೈಗಾರಿಕಾ ಪ್ರದೇಶವನ್ನು ಹೊಂದಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಕೈಗಾರಿಕೆಗಳ ಜೊತೆಗೆ ಜನವಸತಿ ಪ್ರದೇಶವೂ ವೃದ್ಧಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಅನುದಾನದ ಅಗತ್ಯವಿದೆ. ಸರ್ಕಾರದಿಂದ ಹೆಚ್ಚಿನ ಯೋಜನೆಗಳ ಮಂಜೂರಾತಿಗೆ ಪ್ರಯತ್ನಿಸಲಾಗುವುದು ಎಂದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಮುಖಂಡರಾದ ನಾರಾಯಣಸ್ವಾಮಿ, ಪ್ರೇಮ್‌ಕುಮಾರ್, ಬಿ.ಕೃಷ್ಣಪ್ಪ, ಮುನಿರಾಜಪ್ಪ, ಶ್ರೀದೇವಿ, ಸಿದ್ದಪ್ಪ, ಸುರೇಶ್‌ಬಾಬು, ಅಂಬರೀಶ್, ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಕೆಸ್ತೂರು ಬಚ್ಚೇಗೌಡ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ನರಸಿಂಹಮೂರ್ತಿ, ಕಂದಾಯ ನಿರೀಕ್ಷಕ ಶ್ರೀನಿವಾಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.