ದೊಡ್ಡಬಳ್ಳಾಪುರ: ತಾಲ್ಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಎ.ವೆಂಕಟರಾಮಯ್ಯ ಅವರ ನೆನಪಿನಲ್ಲಿ ನಗದು ಪುರಸ್ಕಾರ ವಿತರಿಸಲಾಯಿತು.
ವಕೀಲ ಎ.ವಿ.ಮುರಳಿಧರ್ ಮಾತನಾಡಿ, ಕನ್ನಡ ಶಾಲೆಗಳ ಉನ್ನತೀಕರಣ ಹಾಗೂ ಸೌಲಭ್ಯ ಕಲ್ಪಿಸುವ ಕಡೆಗೆ ಸರ್ಕಾರ ಪ್ರಥಮ ಆದ್ಯತೆ ನೀಡಬೇಕು. ಕನ್ನಡ ಭಾಷೆಯ ನಿಜವಾದ ಸೊಗಡು ಇಂದಿಗೂ ಉಳಿದಿರುವುದು ಗ್ರಾಮೀಣ ಭಾಗದಲ್ಲಿ ಎಂದರು.
ಕನ್ನಡ ಮಾಧ್ಯಮದಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಓದಿದವರು ಇಂದಿಗೂ ದೇಶದ ಉನ್ನತ ಹುದ್ದೆಗಳಲ್ಲಿ ಹಾಗೂ ಸಾಧಕರ ಪಟ್ಟಿಯಲ್ಲಿದ್ದಾರೆ. ಗ್ರಾಮೀಣ ಮಕ್ಕಳು ಕೀಳರಿಮೆಯನ್ನು ಬಿಟ್ಟು ಮುನ್ನಡೆಯುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಉನ್ನತ ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಹೆಚ್ಚನ ಸೌಲಭ್ಯಗಳು ದೊರೆಯುತ್ತಿವೆ. ಇವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಶಾಲೆಯ ಮುಖ್ಯಶಿಕ್ಷಕಿ ಸ್ವರ್ಣಗೌರಿ, ಎಸ್‌ಡಿಎಂಸಿ ಅಧ್ಯಕ್ಷ ಆಂಜನಮೂರ್ತಿ, ಸಹ ಶಿಕ್ಷಕರಾದ ಎನ್. ಆರ್.ಶಿವಕುಮಾರ್, ಸೌಭಾಗ್ಯ, ಆರ್.ರೇಖಾ, ಎಂ.ಭೈರೆಗೌಡ, ಎನ್.ಶಿವಶಂಕರ್, ಸುಜಾತ, ಕಾರ್ಮಿಕ ಇಲಾಖೆಯ ಮುರುಳಿ, ಶಿವಶಂಕರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.