ADVERTISEMENT

ದೊಡ್ಡಬಳ್ಳಾಪುರ: ಕನಕದಾಸ ಜಯಂತಿ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2024, 16:05 IST
Last Updated 18 ನವೆಂಬರ್ 2024, 16:05 IST
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ಸೋಮವಾರ ಕನಕದಾಸ ಜಯಂತಿ ಆಚರಿಸಲಾಯಿತು
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ಸೋಮವಾರ ಕನಕದಾಸ ಜಯಂತಿ ಆಚರಿಸಲಾಯಿತು   

ದೊಡ್ಡಬಳ್ಳಾಪುರ: ಕನಕದಾಸರು ಮೂಲತಃ ಬಾಡ ಪ್ರಾಂತ್ಯದ ದಂಡನಾಯಕರಾಗಿದ್ದರು. ಯುದ್ಧವೊಂದರಲ್ಲಿ ಸೋತ ಅವರಿಗೆ ವೈರಾಗ್ಯ ಉಂಟಾಗಿ ಹರಿಭಕ್ತರಾದರು ಎಂದು ಕನ್ನಡ ಸಾಹಿತ್ಯ ಪರಿಷತ್‌ ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು ಹೇಳಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ಸೋಮವಾರ ನಡೆದ ಕನಕದಾಸ ಜಯಂತಿಯಲ್ಲಿ ಮಾತನಾಡಿದರು.

ಹರಿದಾಸ ಸಾಹಿತ್ಯಕ್ಕೆ ಕೀರ್ತನೆ ಮಾತ್ರವಲ್ಲದೆ ಉತ್ತಮ‌ ಕಾವ್ಯಗಳ ಕೃತಿಗಳನ್ನು ನೀಡಿದ್ದಾರೆ. ಸರಳ ಭಾಷೆಯಲ್ಲಿ ಕೀರ್ತನೆ ಮತ್ತು ಕಾವ್ಯ ರಚಿಸುವ ಮೂಲಕ ಕನ್ನಡತನ ಎತ್ತಿ ಹಿಡಿದಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರ. ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸಿದರು. ‘ಕುಲ ಕುಲವೆಂದು ಹೊಡೆದಾಡದಿರಿ’ ಮುಂತಾದ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಜಾತಿ ವ್ಯವಸ್ಥೆ ನ್ಯೂನತೆ ಹೋಗಲಾಡಿಸಬೇಕೆಂದರು. ಸಮಾಜದ ಪರಿವರ್ತನೆ ಅವರ ಸಾಹಿತ್ಯದ ಪ್ರಮುಖ ಆಶಯ ಎಂದರು.

ADVERTISEMENT

ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಗೋವಿಂದರಾಜ್‌, ಕಸಬಾ ಹೋಬಳಿ ಅಧ್ಯಕ್ಷ ಜಿ.ಸುರೇಶ್, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ, ಗಂಗರಾಜು ಶಿರವಾರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು, ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್, ಕನ್ನಡ ಸಾಹಿತ್ಯ ಪರಿಷತ್‌ ಪ್ರತಿನಿಧಿಗಳಾದ ನಾಗರತ್ನಮ್ಮ, ಸಫೀರ್, ಶ್ರೀನಿವಾಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.