ADVERTISEMENT

ಕೆರೆಗಳ ಅಭಿವೃದ್ಧಿಗೆ ದಾನಿಗಳ ನೆರವು

​ಪ್ರಜಾವಾಣಿ ವಾರ್ತೆ
Published 18 ಮೇ 2019, 13:51 IST
Last Updated 18 ಮೇ 2019, 13:51 IST
ಕೆರೆ ಅಭಿವೃದ್ಧಿಗೆ ಭೂಮಿ ಪೂಜೆ ಸಲ್ಲಿಸಿದ ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ಹಾಗೂ ನಿಸರ್ಗ ನಾರಾಯಣಸ್ವಾಮಿ
ಕೆರೆ ಅಭಿವೃದ್ಧಿಗೆ ಭೂಮಿ ಪೂಜೆ ಸಲ್ಲಿಸಿದ ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ಹಾಗೂ ನಿಸರ್ಗ ನಾರಾಯಣಸ್ವಾಮಿ   

ದೇವನಹಳ್ಳಿ: ಕೆರೆಗಳ ಅಭಿವೃದ್ಧಿಗೆ ದಾನಿಗಳು ಮುಂದೆ ಬಂದಿರುವುದು ಶ್ಲಾಘನೀಯ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಇಲ್ಲಿನ ಜಾಲಿಗೆ ಕೆರೆಯಲ್ಲಿ ನಡೆದ ಭೂಮಿ ಪೂಜೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಬೆಟ್ಟೆನಹಳ್ಳಿ, ಕಾಮೇನಹಳ್ಳಿ ಮತ್ತು ಜಾಲಿಗೆ ಮೂರು ಗ್ರಾಮಗಳ ವ್ಯಾಪ್ತಿಯಲ್ಲಿ ಈ ಕೆರೆ ಇದೆ. ಇದರ ವಿಸ್ತೀರ್ಣ 102.22 ಎಕರೆ. ಬಯಲು ಸೀಮೆ ಭಾಗದಲ್ಲಿ ಜಲಮೂಲ ಪಾತ್ರಗಳಿಲ್ಲ. ದಾನಿ ಆಂಜನೇಯಲು ಎಂಬುವರು ಒಟ್ಟು ಏಳು ಕೆರೆ ಅಭಿವೃದ್ಧಿ ಪಡಿಸುವುದಾಗಿ ಭರವಸೆ ನೀಡಿದ್ದಾರೆ. ದಾನಿಗಳಿಂದ ಉದಾರ ನೆರವು ಹರಿದುಬಂದರೆ ಬಹುತೇಕ ಕೆರೆಗಳು ಅಭಿವೃದ್ಧಿಗೊಳ್ಳಲಿವೆ ಎಂದರು.

ಜಿಲ್ಲಾಧಿಕಾರಿ ಸಿ.ಎಸ್.ಕರೀಗೌಡ ಮಾತನಾಡಿ, ಸ್ವಯಂಪ್ರೇರಣೆಯಿಂದ ದಾನಿಗಳು ಮುಂದೆ ಬಂದಿರುವುದು ಮೆಚ್ಚುಗೆ ಕೆಲಸ ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ಮಂಜುನಾಥ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ, ಜೆಡಿಎಸ್ ತಾಲ್ಲೂಕು ಘಟಕದ ಕಾರ್ಯಾಧ್ಯಕ್ಷ ಆರ್.ಮುನೇಗೌಡ, ಮುಖಂಡ ಶ್ರೀರಾಮಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮುರುಡಯ್ಯ, ತಹಶೀಲ್ದಾರ್ ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.