ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ): ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಶನಿವಾರ ಕಟ್ಟಡಗಳನ್ನು ನೆಲಸಮ ಮಾಡುವಾಗ ತಾಲ್ಲೂಕಿನ ಮೋಪರಹಳ್ಳಿ ಗ್ರಾಮದ ಮನೆಯೊಂದರಲ್ಲಿ ಎಲೆಕ್ಟ್ರಾನಿಕ್ ಮತಯಂತ್ರದ (ಇವಿಎಂ) ಕಂಟ್ರೋಲ್ ಯೂನಿಟ್‌ಗಳು ಪತ್ತೆ ಆಗಿವೆ.
‘ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಂಜಿನಿಯರ್ ಶಿವಕುಮಾರ್ ಎಂಬವರ ಮನೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರದ ಕಂಟ್ರೋಲ್ ಯೂನಿಟ್‌ಗಳು ಸಿಕ್ಕಿವೆ. ಎಲ್ಲ ಯೂನಿಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ತಿರಸ್ಕೃತವಾದ ಇವಿಎಂ ಕಂಟ್ರೋಲ್ ಯೂನಿಟ್‌ಗಳು ಎಂಬ ಮಾಹಿತಿ ಇದೆ’ ಎಂದು ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಮೋಹನಕುಮಾರಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. ಆರಂಭದಲ್ಲಿ ಈ ವಿಷಯವನ್ನು ಮುಚ್ಚಿಡಲಾಗಿತ್ತು.
‘ಎಂಜಿನಿಯರ್ ತಮ್ಮ ಮನೆಯಲ್ಲಿ ಯಾವ ಕಾರಣಕ್ಕಾಗಿ ಈ ಯಂತ್ರಗಳನ್ನು ಇಟ್ಟುಕೊಂಡಿದ್ದರು ಎಂಬ ವಿಷಯ ಇನ್ನೂ ಗೊತ್ತಾಗಿಲ್ಲ. ಈ ಬಗ್ಗೆ ವಿವರಣೆ ಕೋರಿ ಎಂಜಿನಿಯರ್ ಶಿವಕುಮಾರ್ ಅವರಿಗೆ ನೋಟೀಸ್ ನೀಡಲಾಗಿದೆ. ಮುಂದಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ವರದಿ ನೀಡಲಾಗಿದೆ’ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.