ಬೆಂಗಳೂರು: ದೇವನಹಳ್ಳಿಯ ಬಿದಲೂರು ಗ್ರಾಮದಲ್ಲಿ ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕಾಗಿ 20 ವರ್ಷದ ಮಗಳನ್ನು ತಂದೆಯೇ ಕತ್ತು ಸೀಳಿ ಹತ್ಯೆ ಮಾಡಿರುವ ಅಮಾನವೀಯ ಘಟನೆಯನ್ನು ಎಐಎಂಎಸ್ಎಸ್ (ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ) ಖಂಡಿಸಿದೆ.
ಕುಟುಂಬದ ಮರ್ಯಾದೆ ಉಳಿಸಿಕೊಳ್ಳುವುದಕ್ಕಾಗಿ ನಡೆಯುವ ಇಂಥ ಹೀನ ಕೃತ್ಯಗಳು ಆತಂಕ ಹುಟ್ಟಿಸುತ್ತವೆ. ಇವು ಸಮಾಜದಲ್ಲಿ ಬೇರೂರಿರುವ ಜಾತಿ-ಪದ್ಧತಿಗೆ, ಪ್ರಜಾತಂತ್ರ ವಿರೋಧಿ ಧೋರಣೆಗೆ ಕನ್ನಡಿ ಹಿಡಿದಂತಿವೆ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.
ಈ ಕೃತ್ಯ ಎಸಗಿದ ಆರೋಪಿಗೆ ಶಿಕ್ಷೆ ನೀಡಬೇಕು. ಜಾತಿ ಪದ್ಧತಿಯನ್ನು ಕೊನೆಗಾಣಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ಇಂಥ ಹೇಯ ಕೃತ್ಯವನ್ನು ಖಂಡಿಸಿ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಾಂಸ್ಕೃತಿಕ ಹೋರಾಟದಲ್ಲಿ ನಾಡಿನ ಜನತೆ ಪಾಲ್ಗೊಳ್ಳಬೇಕು ಎಂದು ಸಂಘಟನೆ ಕರೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.