ಹೊಸಕೋಟೆ: ‘ವಂಚನೆ ಪ್ರಕರಣ ಹೆಚ್ಚಾಗುತ್ತಿವೆ. ಆದ್ದರಿಂದ ಮಹಿಳೆಯರು ಸಮಾಜದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ತಿಳಿವಳಿಕೆ ಹೊಂದುವುದು ಅತ್ಯಗತ್ಯ’ ಎಂದು ದೊಡ್ಡನಲ್ಲಾಳ ಪಿಡಿಒ ಸುಂದರ್ ಅಭಿಪ್ರಾಯಪಟ್ಟರು.
ತಾಲ್ಲೂಕಿನ ದೊಡ್ಡನಲ್ಲಾಳ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಹೊಸಕೋಟೆ ಬ್ಯಾಂಕ್ ಆಪ್ ಬರೋಡದಿಂದ ಮಹಿಳೆಯರಿಗೆ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಆನ್‌ಲೈನ್ ವ್ಯವಸ್ಥೆಯಲ್ಲಿ ನಾವೆಲ್ಲ ಬದುಕು ಕಟ್ಟಿಕೊಳ್ಳಬೇಕಿರುವುದರಿಂದ ಆನ್‌ಲೈನ್ ಬಗ್ಗೆ ಜಾಗೃತಿ ಹೊಂದಬೇಕು. ಬ್ಯಾಂಕ್‌ಗಳಲ್ಲಿ ಆರ್ಥಿಕ ವ್ಯವಹಾರಗಳನ್ನು ಮಾಡುವುದು, ಡಿಜಿಟಲ್ ತಂತ್ರಜ್ಞಾನದ ತಿಳಿದುಕೊಳ್ಳುವುದರಿಂದ ಮೋಸಕ್ಕೆ ಒಳಗಾಗುವುದನ್ನು ತಪ್ಪಿಸಿಕೊಳ್ಳಬಹುದು’ ಎಂದರು.
ಭ್ರಷ್ಟಾಚಾರದ ವಿರುದ್ಧ ಹೋರಾಡಲು ಅರಿವು ಮೂಡಿಸಲಾಯಿತು. ಗ್ರಾ.ಪಂ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ಕೃಷ್ಣಮೂರ್ತಿ, ಬ್ಯಾಂಕ್ ಆಪ್ ಬರೋಡ ಪ್ರಹ್ಲಾದ್ ಗುಪ್ತಾ, ಕ್ರಿಸ್ ಅಂಕಿತ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.