ADVERTISEMENT

ರೈತರಿಗೆ ನೀಡುವ ಹಾಲಿನ ದರದಲ್ಲಿ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 1:47 IST
Last Updated 18 ಜನವರಿ 2021, 1:47 IST
ಹೊಸಕೋಟೆ ಡೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ತರಗತಿಗಳಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು. ಶಾಸಕ ಶರತ್ ಬಚ್ಚೇಗೌಡ, ಡೇರಿ ಸದಸ್ಯ ಹುಲ್ಲೂರು ಮಂಜುನಾಥ್ ಇದ್ದರು
ಹೊಸಕೋಟೆ ಡೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ತರಗತಿಗಳಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು. ಶಾಸಕ ಶರತ್ ಬಚ್ಚೇಗೌಡ, ಡೇರಿ ಸದಸ್ಯ ಹುಲ್ಲೂರು ಮಂಜುನಾಥ್ ಇದ್ದರು   

ಹೊಸಕೋಟೆ: ಈ ಹಿಂದೆ ಸಚಿವಾಗಿದ್ದಾಗ ತಾಲ್ಲೂಕಿನಲ್ಲಿ 40 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ಮಾಡಿರುವುದಾಗಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.

ತಾಲ್ಲೂಕಿನ ಹಾಲು ಉತ್ಪಾದಕರ ಸಂಘದ ಆವರಣದಲ್ಲಿ ವಿವಿಧ ಪಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಮಾತನಾಡಿದರು. ತಾಲ್ಲೂಕಿನಾದ್ಯಂತ ವಿವಿಧೆಡೆ ಕಾರ್ಖಾನೆ ತೆರೆದು ಸ್ಥಳೀಯರಿಗೆ ಉದ್ಯೋಗ ನೀಡಲಾಗಿದೆ. ಇದರಿಂದ ತಾಲ್ಲೂಕಿನ ಯುವಕರು ಉದ್ಯೋಗ ಅರಸಿ ಬೇರೆಡೆಗೆ ಹೋಗುವುದು ತಪ್ಪಿದೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ, ತಾಲ್ಲೂಕಿನಲ್ಲಿ ಸುಮಾರು ಎಂಟು ಸಾವಿರ ಕುಟುಂಬಗಳು ಹೈನುಗಾರಿಕೆ ನಂಬಿ ಜೀವನ ನಡೆಸುತ್ತಿದ್ದು 201 ಡೇರಿಗಳು ಕೆಲಸ ಮಾಡುತ್ತಿವೆ ಎಂದರು.

ADVERTISEMENT

ದರದಲ್ಲಿ ಹೆಚ್ಚಳ: ಇದೇ ಸಂದರ್ಭದಲ್ಲಿ ಮಾತನಾಡಿದ ಡೇರಿ ಸದಸ್ಯ ಹುಲ್ಲೂರು ಮಂಜುನಾಥ್, ಫೆಬ್ರುವರಿ 1ರಿಂದ ರೈತರು ನೀಡುವ ಹಾಲಿಗೆ ಎರಡು ರೂಪಾಯಿ ಹೆಚ್ಚಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಹಸು ಎತ್ತುವ ಯಂತ್ರಗಳನ್ನು ವಿವಿಧ ಡೇರಿಗಳಿಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಕೋಡಿಹಳ್ಳಿ ಸೊಣ್ಣಪ್ಪ, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಎಲ್ ಅಂಡ್ ಟಿ ಮಂಜುನಾಥ್, ಸದಸ್ಯರಾದ ಉಪ್ಪಾರಹಳ್ಳಿ ಮುನಿಯಪ್ಪ, ಜಿಲ್ಲಾ ಪಂಚಾಯತಿ ಸದಸ್ಯ ಮಂಜುನಾಥ್, ಮುಖಂಡರಾದ ಸಿ.ಬೈರೇಗೌಡ, ಗೋಪಾಲಗೌಡ, ಶೇಖರ್ ಗೌಡ,ವಕೀಲ ಮಂಜುನಾಥ್ ಹಾಗೂ ಡೇರಿ ವ್ಯವಸ್ಥಾಪಕ ಶಿವಾಜಿ ನಾಯಕ್,ವಿಸ್ತರಣಾಧಿಕಾರಿ ಶ್ರೀರಾಮ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.