ಜಿ. ಹೊಸಹಳ್ಳಿ (ದೊಡ್ಡಬಳ್ಳಾಪುರ): ಜಿ.ಹೊಸಹಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಬಾಗಿಲನ್ನು ಗ್ಯಾಸ್ ಕಟರ್ ಬಳಸಿ ಕತ್ತರಿಸಿ ಒಳನುಗ್ಗಿರುವ ಕಳ್ಳರು ನಗದು ಸೇರಿದಂತೆ ಸುಮಾರು ₹ 3.50 ಕೋಟಿ ಮೌಲ್ಯದ ಚಿನ್ನಾಭರಣ ದೋಚಿರುವ ಪ್ರಕರಣ ಶುಕ್ರವಾರ ರಾತ್ರಿ
ನಡೆದಿದೆ.
ನಾಲ್ಕನೇ ಶನಿವಾರ ಬ್ಯಾಂಕಿಗೆ ರಜೆ ಇದ್ದುದ್ದರಿಂದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಡಿವೈಎಸ್‌ಪಿ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳ್ಳರ ಪತ್ತೆಗಾಗಿ ಬೆರಳಚ್ಚು ತಜ್ಞರು, ಶ್ವಾನದಳ ಕರೆಸಲಾಗಿತ್ತು.
ಬ್ಯಾಂಕ್ ಸಿಬ್ಬಂದಿ ಹೊರತುಪಡಿಸಿ ಬೇರೆಯವರು ಲಾಕರ್ ತೆರೆದರೆ ಸೈರನ್ ಶಬ್ದ ಮಾಡುವ ವ್ಯವಸ್ಥೆ, ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ ಸಾಮಾನ್ಯವಾಗಿ ಎಲ್ಲಾ ಬ್ಯಾಂಕ್‌ಗಳಲ್ಲೂ ಈಗ ಇದ್ದೇ ಇರುತ್ತದೆ. ಆದರೆ, ಈ ಎಚ್ಚರಿಕೆಯ ಉಪಕರಣಗಳು ಕಳ್ಳರು ಒಳನುಗ್ಗಿರುವ ಸಂದರ್ಭದಲ್ಲಿ ಕೆಲಸ ಮಾಡದೆ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಹರೀಶ್, ಸಬ್ ಇನ್‌ಸ್ಪೆಕ್ಟರ್ ಗಜೇಂದ್ರ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.