ADVERTISEMENT

ಮಾತೃಭಾಷೆ ಕಲಿಕೆ ಜತೆಗೆ ಭಾಷಾಭಿಮಾನ ಬೆಳೆಸಿ: ಕೆ.ಎಚ್.ಮುನಿಯಪ್ಪ

ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2024, 14:21 IST
Last Updated 1 ನವೆಂಬರ್ 2024, 14:21 IST
ದೇವನಹಳ್ಳಿ ಜೂನಿಯಲ್‌ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಆಹಾರ ಮತ್ತು  ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಧ್ವಜಾರೋಹಣ ನೆರವೇರಿಸಿದರು.
ದೇವನಹಳ್ಳಿ ಜೂನಿಯಲ್‌ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಆಹಾರ ಮತ್ತು  ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಧ್ವಜಾರೋಹಣ ನೆರವೇರಿಸಿದರು.   

ದೇವನಹಳ್ಳಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಶುಕ್ರವಾರ ಪಟ್ಟಣದ ಜೂನಿಯರ್‌ ಕಾಲೇಜು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ 69ನೇ ಕನ್ನಡ ರಾಜ್ಯೋತ್ಸವದಲ್ಲಿ ಆಹಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು, 'ಮನೆಯೇ ಮೊದಲ ಪಾಠಶಾಲೆ. ಮಕ್ಕಳಿಗೆ ಮಾತೃಭಾಷೆ ಕಲಿಕೆಯೊಂದಿಗೆ ಭಾಷಾಭಿಮಾನ ಬೆಳೆಸುವುದು ಮುಖ್ಯ. ಎಲ್ಲರಲ್ಲಿಯೂ ನಾಡು, ನುಡಿ ಬಗ್ಗೆ ಹೆಮ್ಮೆ ಪಡುವಂತಹ ಕಲಿಕೆ ಪ್ರೋತ್ಸಾಹಿಸಬೇಕು' ಎಂದು ತಿಳಿಸಿದರು.

ಕನ್ನಡ ನಾಡು ಪ್ರೀತಿ ಪ್ರತೀಕವಾಗಿದೆ. ತ್ಯಾಗ ಬಲಿದಾನ ನೆಲೆವೀಡು ನಿರ್ಮಾಣವಾಗಿದೆ. ಇಲ್ಲಿ ಪರೋಪಕಾರ ಗುಣವಿದೆ. ಮಹಾ ಸಾಮ್ರಾಜ್ಯಗಳಾದ ಹೊಯ್ಸಳ, ಚಾಲುಕ್ಯ, ಕದಂಬರು ಆಳಿದ ಪುಣ್ಯ ಭೂಮಿ ಎಂದು ಸ್ಮರಿಸಿದರು.

ADVERTISEMENT

ಸಿಎಸ್‌ಆರ್ ಅನುದಾನದಲ್ಲಿ ಜಿಲ್ಲೆಗೆ ಒಟ್ಟು ₹49.00ಕೋಟಿ ವೆಚ್ಚದಲ್ಲಿ ನೆಲಮಂಗಲ-36, ದೊಡ್ಡಬಳ್ಳಾಪುರ-22, ಹೊಸಕೋಟೆ- 33, ದೇವನಹಳ್ಳಿ-36 ಸೇರಿದಂತೆ 130 ಶಾಲೆಗಳಲ್ಲಿ ಶೌಚಾಲಯ, ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡುವ ಮೂಲಕ ಗ್ರಾಮೀಣ ಶಾಲೆಗಳಲ್ಲಿ ಉತ್ತಮ ಮೂಲ‌ ಸೌಕರ್ಯ ಹಾಗೂ ಗುಣಮಟ್ಟದ ಶಿಕ್ಷಣ ನೀಡುವತ್ತ ದಾಪುಗಾಲು ಇಡಲಾಗಿದೆ ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 24 ಸಾಧಕರಿಗೆ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.

ಇದೇ ವೇಳೆ ಜಿಲ್ಲಾಧಿಕಾರಿ ಎನ್‌.ಶಿವಶಂಕರ, ಜಿ.ಪಂ ಸಿಇಒ ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಕೆ ಬಾಬಾ, ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್‌.ಕೃಷ್ಣಪ್ಪ, ದೇವನಹಳ್ಳಿ ತಹಶೀಲ್ದಾರ್‌ ಬಾಲಕೃಷ್ಣ, ತಾ.ಪಂ ಇಒ ಶ್ರೀನಾಥ್‌ ಗೌಡ, ಪುರಸಭೆ ಮುಖ್ಯಾಧಿಕಾರಿ ದೊಡ್ಡಮಲವಯ್ಯ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜಣ್ಣ, ತಾಲ್ಲುಕು ಅಧ್ಯಕ್ಷ ಸಿ.ಜಗನ್ನಾಥ್‌, ಬಯಪ್ಪ ಅಧ್ಯಕ್ಷ ವಿ.ಶಾಂತ ಕುಮಾರ್‌ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಪಥ ಸಂಚಾಲದಲ್ಲಿ
ಶಾಲಾ ಮಕ್ಕಳು ವಿವಿಧ ಸಾಂಸ್ಕೃತಿ ನೃತ್ಯ ಪ್ರದರ್ಶಿಸಿದರು
 ವಿವಿಧ ಕ್ಷೇತ್ರದ ಸಾಧಕರಿಗೆ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು

ಸುಗಮ ಸಂಚಾರಕ್ಕೆ ಹ್ಯಾಮ್‌ ಹೆದ್ದಾರಿ

ಎತ್ತಿನಹೊಳೆ ಯೋಜನೆಗೆ ಸಕಲೇಶಪುರದ ಅಳುವಳ್ಳಿಯಲ್ಲಿ ನೀರನ್ನು ಲಿಪ್ಟ್‌ ಮಾಡುವ ಪಂಪ್ ಹೌಸ್‌ಗೆ ಚಾಲನೆ ನೀಡಲಾಗಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ 1924 ಟಿಎಂಸಿ ಹಾಗೂ ಅಂತರ್ಜಲ ಮರುಪೂರ್ಣಗೊಳಿಸುವ ಸಲುವಾಗಿ 46 ಸಣ್ಣ ನೀರಾವರಿ ಕೆರೆಗಳಿಗೆ 2901 ಟಿಎಂಸಿ ನೀರು ತುಂಬಿಸಲು ಉದ್ದೇಶಿಸಲಾಗಿದೆ. ದೇವನಹಳ್ಳಿಯಿಂದ ತಮಿಳುನಾಡು ಗಡಿವರೆಗೆ 110.40 ಕಿ.ಲೋ ಮೀಟರ್‌ ಹೈಬ್ರಿಡ್ ಮಾದರಿಯಲ್ಲಿ ರಸ್ತೆ ಅಭಿವೃದ್ಧಿಪಡಿಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ರಸ್ತೆ ದೇವನಹಳ್ಳಿ-ವಿಜಯಪುರ-ಎಚ್.ಕ್ರಾಸ್-ವೇಮಗಲ್-ಮಾಲೂರು ಮೂಲಕ ತಮಿಳುನಾಡು ಗಡಿ ಸಂಪರ್ಕಿಸಲಿದೆ ಎಂದರು.

ಅನ್ನ ಸುವಿಧಾ ಯೋಜನೆ ಜಾರಿ

ರಾಜ್ಯದ ಪ್ರತಿಯೊಬ್ಬ ಪ್ರಜೆ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸರ್ಕಾರದ ಆಶಯವಾಗಿದೆ. ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಅನ್ನ ಸುವಿಧಾ ಯೋಜನೆ ಜಾರಿಗೆ ತರಲಾಗಿದೆ. 90 ವರ್ಷ ವಯಸ್ಸಿನ ಹಿರಿಯ ನಾಗರಿಕಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ತಲುಪಿಸುವ ಮಹತ್ವ ಯೋಜನೆ ಇದಾಗಿದೆ. ರಾಜ್ಯದಲ್ಲಿ 7743 ಫಲಾನುಭವಿಗಳಿಗೆ ಹಾಗೂ ಜಿಲ್ಲೆಯ 107 ಪಡಿತರ ಚೀಟಿದಾರರ ಮನೆಗೆ ಪಡಿತರ ವಿತರಣೆ ಮಾಡುವ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.