ADVERTISEMENT

ಅನ್ಯ ಭಾಷಿಕರಿಗೆ ರಾಜ್ಯ ಔದ್ಯೋಗಿಕ ನೆಲೆ: ಶಾಸಕ ಶರತ್‌ ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2024, 15:31 IST
Last Updated 1 ನವೆಂಬರ್ 2024, 15:31 IST
ಹೊಸಕೋಟೆ ತಾಲ್ಲೂಕು ಕಚೇರಿ ಆವರಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಶಾಸಕ ಶರತ್ ಬಚ್ಚೇಗೌಡ ಭುವನೇಶ್ವರಿ ಹೊತ್ತ ಬೆಳ್ಳಿ ರಥಕ್ಕೆ ಚಾಲನೆ ನೀಡಿದರು
ಹೊಸಕೋಟೆ ತಾಲ್ಲೂಕು ಕಚೇರಿ ಆವರಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಶಾಸಕ ಶರತ್ ಬಚ್ಚೇಗೌಡ ಭುವನೇಶ್ವರಿ ಹೊತ್ತ ಬೆಳ್ಳಿ ರಥಕ್ಕೆ ಚಾಲನೆ ನೀಡಿದರು    

ಹೊಸಕೋಟೆ: ಕರ್ನಾಟಕ ಅನ್ಯ ಭಾಷಿಕರಿಗೆ ಔದ್ಯೋಗಿಕವಾಗಿ ನೆಲೆ ಒದಗಿಸುತ್ತಿದೆ. ಅಂತವರಿಗೆ ಕನ್ನಡ ಭಾಷೆ ಕಲಿಸುವ ಕೆಲಸವನ್ನು ಕನ್ನಡಿಗರು ಮಾಡಬೇಕು ಎಂದು ಶಾಸಕ ಶರತ್‌ ಬಚ್ಚೇಗೌಡ ತಿಳಿಸಿದರು.

ಅವರು ನಗರದ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಉದ್ದೇಶಿಸಿ ಮಾತನಾಡಿದರು.

ದೇಶದ ಸ್ವಾತಂತ್ರ್ಯ ಹೋರಾಟದ ಜತೆಗೆ ಕರ್ನಾಟಕದ ಏಕೀಕರಣಕ್ಕಾಗಿ ಅನೇಕ ಮಹನೀಯರು ದುಡಿದಿದ್ದಾರೆ. ಇವರನ್ನು ಸ್ಮರಿಸುವ ಕಾರ್ಯ ನಿರಂತರವಾಗಿ ಆಗಬೇಕು. ಬರೀ ಕನ್ನಡ ರಾಜ್ಯೋತ್ಸವ ದಿನ ಮಾತ್ರ ಕನ್ನಡಾಭಿಮಾನ ಮೆರೆಯದೆ ನಿರಂತರವಾಗಿ ಈ ಕೆಲಸವಾಗಬೇಕಿದೆ ಎಂದರು.

ADVERTISEMENT

ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಕನ್ನಡದಲ್ಲಿ ಹೆಚ್ಚು ಅಂಕ ಪಡೆದಿರುವ ತಾಲ್ಲೂಕಿನ 11 ವಿದ್ಯಾರ್ಥಿಗಳನ್ನು ಗೌರವಿಸಿ ಸತ್ಕರಿಸಲಾಯಿತು. ಭುವನೇಶ್ವರಿದೇವಿ ವಿಗ್ರಹ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ಇ.ಒ ನಾರಾಯಣಸ್ವಾಮಿ, ಬಿಇಒ ಪದ್ಮನಾಭ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೇಶವಮೂರ್ತಿ, ಸದಸ್ಯ ಎಚ್.ಎಂ.ಸುಬ್ಬರಾಜು, ಕೊರಳೂರು ಸುರೇಶ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪೂಜೆನ ಅಗ್ರಹಾರ ಕೃಷ್ಣಮೂರ್ತಿ, ಉದ್ಯಮಿ ಬಿ.ವಿ.ಭೈರೆಗೌಡ, ನಗರಸಭೆ ಅಧ್ಯಕ್ಷೆ ಆಶಾ ರಾಜಶೇಖರ್, ಉಪಾಧ್ಯಕ್ಷ ಸಿಪಿಎನ್ ನವೀನ್, ಡಿ.ಟಿ.ವೆಂಕಟೇಶ್, ವಿಜಯಕುಮಾರ್ ಇದ್ದರು.

ಎಸ್ಸೆಸ್ಸೆಲ್ಸಿ ಕನ್ನಡ ವಿಷಯದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.