ADVERTISEMENT

ಕೆಂಪೇಗೌಡ ವಿಮಾನ ನಿಲ್ದಾಣದ ಅಧಿಕೃತ ಗೀತೆ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 21:01 IST
Last Updated 19 ಜುಲೈ 2024, 21:01 IST
<div class="paragraphs"><p>ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಸಾಂದರ್ಭಿಕ ಚಿತ್ರ)</p></div>

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಸಾಂದರ್ಭಿಕ ಚಿತ್ರ)

   

ದೇವನಹಳ್ಳಿ: ವಿಮಾನ ಪ್ರಯಾಣವನ್ನು ಮಾಧುರ್ಯವಾಗಿಸಲು ಹಾಗೂ ಕಾಯುವಿಕೆ ಸಮಯವನ್ನು ಸುಮಧುರಗೊಳಿಸಲು ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣ ತನ್ನ ಅಧಿಕೃತ ಹಾಡು ಶುಕ್ರವಾರ ಬಿಡುಗಡೆಗೊಳಿಸಿದೆ.

ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ರಿಕಿ ಕೇಜ್‌ ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಲೋನಿ ಪಾರ್ಕ್‌ ಮತ್ತು ಗಾಯಕ ಸಿದ್ಧಾರ್ಥ ಬೆಳ್ಮಣ್‌ ಅವರು ದನಿ ನೀಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್‌ ಮಿಳಿತ ಈ ಹಾಡಿನ ವೈಶಿಷ್ಟ್ಯ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ಬೆಂಗಳೂರು ನನ್ನ ಎರಡನೇ ಮನೆ. ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಹಾಡು ಸಂಯೋಜಿಸಿರುವುದು ಖುಷಿ ಕೊಟ್ಟಿದೆ. ವಿಮಾನ ನಿಲ್ದಾಣ ಮೂಲಕ ದೇಶ ಮತ್ತು ವಿದೇಶಗಳಿಗೆ ಸಂಚರಿಸುವ ಲಕ್ಷಾಂತರ ಪ್ರಯಾಣಿಕರ ಕತೆ, ಭಾವನೆ ಮತ್ತು ಅನುಭವವನ್ನು ಈ ಹಾಡಿನಲ್ಲಿ ಅಳವಡಿಸಿಕೊಳ್ಳಲಾಗಿದೆ’ ಎಂದು ಸಂಗೀತ ಸಂಯೋಜಕ ರಿಕಿ ಕೇಜ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.