ವಿಜಯಪುರ(ದೇವನಹಳ್ಳಿ): ಚುನಾವಣೆ ಅಕ್ರಮ ತಡೆಗೆ ಚುನಾವಣಾ ಆಯೋಗವು ಪ್ರಮುಖ ರಸ್ತೆಗಳಲ್ಲಿ ನಿರ್ಮಿಸಿದ ಚೆಕ್‌ಪೋಸ್ಟ್‌ಗಳಲ್ಲಿ ಶೌಚಾಲಯ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳು ಮರೀಚಿಕೆಯಾಗಿವೆ. ಇದರಿಂದ ಇಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಪರದಾಡುವಂತಾಗಿದೆ.
ವಾಹನಗಳಲ್ಲಿ ಸಾಗಾಣೆ ಮಾಡುವ ಮದ್ಯ, ಹಣ ಹಾಗೂ ಉಡುಗೊರೆಗಳು ಸೇರಿದಂತೆ ಚುನಾವಣಾ ಅಕ್ರಮ ತಡೆಗಾಗಿ ರಸ್ತೆಯ ಇಕ್ಕೆಲುಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಸಿ.ಸಿ. ಕ್ಯಾಮೆರಾ ಹಾಗೂ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಶೌಚಾಲಯಗಳ ವ್ಯವಸ್ಥೆಯಿಲ್ಲವಾಗಿದೆ. ಇದರಿಂದ ಹಗಲಿನಲ್ಲಿ ಸಿಬ್ಬಂದಿ ಸಮೀಪದ ಮನೆಗಳನ್ನು ಶೌಚಕ್ಕಾಗಿ ಅವಲಂಬಿಸಿದ್ದಾರೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಪರದಾಡುತ್ತಿದ್ದಾರೆ.
ಚೆಕ್ ಪೋಸ್ಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಭದ್ರತೆಯಿಲ್ಲದಂತಾಗಿದೆ. ರಾತ್ರಿ ವೇಳೆ ಮದ್ಯಪಾನ ಮಾಡಿಕೊಂಡು ಬರುವ ವಾಹನಗಳ ಚಾಲಕರು, ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗುವ ಘಟನೆಗಳು ನಡೆಯುತ್ತಿವೆ. ಸಿಬ್ಬಂದಿಗೆ ವಾಕಿಟಾಕಿಗಳನ್ನು ವಿತರಿಸಿಲ್ಲ. ಒಬ್ಬೊಬ್ಬ ಕಾನ್‌ಸ್ಟೆಬಲ್‌ಗಳನ್ನು ನೇಮಿಸಲಾಗಿದೆ. ಆದ್ದರಿಂದ ಜಿಲ್ಲಾಡಳಿತ ಹಾಗೂ ಚುನಾವಣಾ ಅಧಿಕಾರಿಗಳು, ಚೆಕ್ ಪೋಸ್ಟ್‌ಗಳಿಗೆ ಸೂಕ್ತ ಸೌಕರ್ಯ ಕಲ್ಪಿಸಬೇಕು ಎಂದು ಹೆಸರು ಹೇಳಲಿಚ್ಚಿಸದ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.