ADVERTISEMENT

ದಾಬಸ್‌ಪೇಟೆ: ಬೋನಿಗೆ ಬಿದ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 21:45 IST
Last Updated 20 ಫೆಬ್ರುವರಿ 2023, 21:45 IST
   

ದಾಬಸ್‌ಪೇಟೆ: ತ್ಯಾಮಗೊಂಡ್ಲು ಹೋಬಳಿ ಮಣ್ಣೆ ಗ್ರಾಮದ ಸುತ್ತಮುತ್ತ ಕೆಲವು ತಿಂಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆಯು ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಬಿದ್ದಿದೆ.‌

ಮೂರು ವರ್ಷದ ಗಂಡು ಚಿರತೆ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿತ್ತು. ಚಿರತೆಯೊಂದು ಆಗಾಗ ಸಾರ್ವಜನಿಕರ ಕಣ್ಣಿಗೆ ಬೀಳುತ್ತಿತ್ತು. ಒಂದು ತಿಂಗಳ ಹಿಂದೆ ಮಣ್ಣೆ ಗ್ರಾಮದ ಡಿಮಂಡಲ ಎಸ್ಟೇಟ್ ವ್ಯಾಪ್ತಿಯಲ್ಲಿ ಮನೆಯ ಮುಂದೆ ಮಲಗಿದ್ದ ನಾಯಿಯನ್ನು ಎಳೆದೊಯ್ದಿತ್ತು. ಎರಡು ಮೂರು ದಿನಗಳ ಹಿಂದೆ ಮನೆ ಪಕ್ಕದಲ್ಲಿ ಕಟ್ಟಿದ ಕರುವನ್ನು ಎಳೆದುಕೊಂಡು ಹೋಗಿತ್ತು. ಇದರಿಂದ ಭಯಬೀತರಾಗಿದ್ದ ಗ್ರಾಮಸ್ಥರು, ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರು.

ಅರಣ್ಯ ಇಲಾಖೆ ಸಿಬ್ಬಂದಿ ಕರು ಎಳೆದುಕೊಂಡು ಹೋದ ಸ್ಥಳದಲ್ಲಿಯೇ ಬೋನು ಇರಿಸಿದ್ದರು. ಮರುದಿನವೇ ಚಿರತೆ ಬೋನಿಗೆ ಬಿದ್ದಿದೆ. ಸೆರೆ ಸಿಕ್ಕ ಚಿರತೆಯನ್ನು ಮಲೆಮಹದೇಶ್ವರ ಬೆಟ್ಟದ ತಪ್ಪಲಿಗೆ ಬಿಡಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.