ಹೊಸಕೋಟೆ: ತಾಲ್ಲೂಕು ಕಾನೂನು ಸೇವೆ ಪ್ರಾಧಿಕಾರದಿಂದ ವಕೀಲರ ಸಹಕಾರದೊಂದಿಗೆ ಇಲ್ಲಿನ ನ್ಯಾಯಾಲಯದಲ್ಲಿ ಮಾರ್ಚ್ 9 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ.
ರಾಜೀ ಸಂಧಾನದ ಮೂಲಕ ವ್ಯಾಜ್ಯ ಬಗೆಹರಿಸುಕೊಳ್ಳುವುದರಿಂದ ಸಮಯ ಮತ್ತು ಹಣ ಉಳಿತಾಯವಾಗುತ್ತದೆ. ಮಾನಸಿಕ ನೆಮ್ಮದಿಯೂ ನಮ್ಮದಾಗುತ್ತದೆ. ಅಲ್ಲದೆ ಕಕ್ಷಿದಾರರಲ್ಲಿ ಪರಸ್ಪರ ಸೌಹಾರ್ದ ಬೆಳೆಯುತ್ತದೆ. ಲೋಕ ಅದಾಲತ್ ಅನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಲ್ಲೂಕು ಕಾನೂನು ಸೇವೆ ಪ್ರಾಧಿಕಾರ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.