ಹೊಸಕೋಟೆ: ಸೂಲಿಬೆಲೆ ಹೋಬಳಿ ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ಅಳವಡಿಸಿದ್ದ ರಾಮನ ಫ್ಲೆಕ್ಸ್ ಅನ್ನು ಸೋಮವಾರ ಸಂಜೆ ಕಿಡಿಗೇಡಿಗಳು ಹರಿದ ಪರಿಣಾಮ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನದ ವಾತಾವರಣ ನಿರ್ಮಾಣವಾಗಿತ್ತು.
ಸ್ಥಳದಲ್ಲಿ ಜಮಾಯಿಸಿದ ಗ್ರಾಮಸ್ಥರು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಸೂಲಿಬೆಲೆ ವೃತ್ತ ನಿರೀಕ್ಷಕ ರವಿ, ನಂದಗುಡಿ ವೃತ್ತ ನಿರೀಕ್ಷಕ ದಿವಾಕರ್ ಗ್ರಾಮಕ್ಕೆ ಭೇಟಿ ನೀಡಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ ನಂತರ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.