ಹೊಸಕೋಟೆ: 2019-20ನೇ ಸಾಲಿನ ಯೋಜನೆಗಳ ಜಾರಿ ಸಂಬಂಧ ಅಧಿಕಾರಿಗಳು ವಹಿಸಿರುವ ನಿರ್ಲಕ್ಷ್ಯದ ಬಗ್ಗೆ ಶಾಸಕ ಶರತ್ ಬಚ್ಚೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ತಾ.ಪಂ ಕಚೇರಿ ಸಭಾಂಗಣದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ತಾಂಡ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಯೋಜನೆಯಡಿ ಫಲಾನುಭವಿಗಳು ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯಲ್ಲಿ ಅವರುಮಾತನಾಡಿದರು.
2018-19ನೇ ಸಾಲಿನಲ್ಲಿ ಕೊರೆಸಲಾಗಿರುವ ಕೊಳವೆಬಾವಿಗಳಿಗೆ ಇನ್ನೂ ಮೋಟರ್ ಅಳವಡಿಸಿಲ್ಲ. 2019-20ನೇ ಸಾಲಿನ ಯೋಜನೆಗಳು ಜಾರಿ ಮಾಡದಿರುವುದರಿಂದ ಫಲಾನುಭವಿಗಳಿಗೆ ತೊಂದರೆಯಾಗಿದೆ. ಕೂಡಲೇ, ಅರ್ಹರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್ ಗೌಡ, ಉಪ ತಹಶೀಲ್ದಾರ್ ಪ್ರಭಾಕರ್, ತಾಲ್ಲೂಕು ಪಂಚಾಯಿತಿ ಸದಸ್ಯ ಡಾ.ಡಿ.ಟಿ. ವೆಂಕಟೇಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.