ADVERTISEMENT

ಗೈರಾದ ಅಧಿಕಾರಿಗಳಿಗೆ ನೋಟಿಸ್‌: ಗ್ರಾಪಂ ಅಧ್ಯಕ್ಷ ಆಕ್ರೋಶ

ಗ್ರಾಮಸಭೆಗೆ ಬಾರದ ಅಧಿಕಾರಿಗಳು: ಗ್ರಾಪಂ ಅಧ್ಯಕ್ಷ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2024, 15:45 IST
Last Updated 20 ನವೆಂಬರ್ 2024, 15:45 IST
ಆನೇಕಲ್ ತಾಲ್ಲೂಕಿನ ದೊಮ್ಮಸಂದ್ರ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಮೊದಲನೇ ಸುತ್ತಿನ ಗ್ರಾಮಸಭೆಯನ್ನುದ್ದೇಶಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ನರೇಶ್‌ ಮಾತನಾಡಿದರು
ಆನೇಕಲ್ ತಾಲ್ಲೂಕಿನ ದೊಮ್ಮಸಂದ್ರ ಗ್ರಾಮ ಪಂಚಾಯಿತಿಯ 2024-25ನೇ ಸಾಲಿನ ಮೊದಲನೇ ಸುತ್ತಿನ ಗ್ರಾಮಸಭೆಯನ್ನುದ್ದೇಶಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ನರೇಶ್‌ ಮಾತನಾಡಿದರು   

ಆನೇಕಲ್ : ಗ್ರಾಮಸಭೆಗಳು ಗ್ರಾಮೀಣ ಜನತೆಯ ಸಮಸ್ಯೆಗಳನ್ನು ಪರಿಹರಿಸುವ ವೇದಿಕೆಯಾಗಿದೆ. ಆದರೆ ಹಲವಾರು ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮಸಭೆಗೆ ಬರುತ್ತಿಲ್ಲ. ಇದರಿಂದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ತಿಳಿಸಲು ಸಾಧ್ಯವಾಗುವುದಿಲ್ಲ ಎಂದು ದೊಮ್ಮಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ನರೇಶ್‌ ಅಸಮಾಧಾನ ವ್ಯಕ್ತಪಿಸಿದರು. 

ತಾಲ್ಲೂಕಿನ ದೊಮ್ಮಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ನಡೆದ  2024-25ನೇ ಸಾಲಿನ ಮೊದಲನೇ ಸುತ್ತಿನ ಗ್ರಾಮಸಭೆಯಲ್ಲಿ ಮಾತನಾಡಿದರು.

ಕಳೆದ ಬಾರಿ ಸಹ ಅಧಿಕಾರಿಗಳ ಗೈರಿನಿಂದಾಗಿ ಗ್ರಾಮಸಭೆಯನ್ನು ಮುಂದೂಡಲಾಗಿತ್ತು. ಆದರೆ ಈ ಬಾರಿಯು ಹಲವು ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದಾರೆ. ಹಾಗಾಗಿ ಗೈರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ದೊಮ್ಮಸಂದ್ರ ಗ್ರಾಮದಲ್ಲಿ 200 ಕ್ಕೂ ಹೆಚ್ಚು ರೇಷನ್‌ ಕಾರ್ಡ್‌ಗಳು ರದ್ದಾಗಿವೆ. ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ADVERTISEMENT

ಗ್ರಾಮಸಭೆಗಳಲ್ಲಿ ಒಂದೇ ಸೂರಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳುವುದರಿಂದ ಸಾರ್ವಜನಿಕರ ಅಲೆದಾಟ ತಪ್ಪುತ್ತದೆ. ಹಾಗಾಗಿ ಅಧಿಕಾರಿಗಳು ಗ್ರಾಮಸಭೆಗಳಿಗೆ ಕಡ್ಡಾಯವಾಗಿ ಬರಬೇಕು. ಗೈರಾಗಿರುವ ಅಧಿಕಾರಿಗಳಿಗೆ ನೋಟಿಸ್‌ ನೀಡುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ದೊಮ್ಮಸಂದ್ರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥರೆಡ್ಡಿ, ತಾಲ್ಲೂಕು ಪಂಚಾಯಿತಿ ಲೆಕ್ಕಾಧಿಕಾರಿ ರಾಜು, ದೊಮ್ಮಸಂದ್ರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಡಿ.ಎಚ್.ದಿವ್ಯಾ, ಸದಸ್ಯರಾದ ಉಮೇಶ್‌ ಬಾಬು, ಗಿರಿಜಾ, ರಾಜಣ್ಣ, ವರಲಕ್ಷ್ಮೀ, ಮುನೀಂದ್ರ, ಮಂಜುಳಾ, ರತ್ನಮ್ಮ, ನಾರಾಯಣ, ಗಿರಿಜಾ, ಸುರೇಶ್, ಆರತಿ ಜವರಾಯಿಗೌಡ, ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.