ಚಿಂತಾಮಣಿ: ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಪದವಿ, ವೃತ್ತಿಪರ ಪದವಿ, ಸ್ನಾತಕೋತ್ತರ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮತ್ತು ಪ್ರವರ್ಗ–1 ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ(ಊಟ ಮತ್ತು ವಸತಿ ಸಹಾಯ ಯೋಜನೆ)ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಿದೆ.
2024-25 ನೇ ಸಾಲಿನಲ್ಲಿ ಓದುತ್ತಿರುವ ಆಸಕ್ತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು htts://ssp.postmatric.karnataka.gov.in ವೆಬ್‌ಸೈಟ್ ಮೂಲಕ ನವೆಂಬರ್ 30ರೊಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಜತೆಗೆ ಸಲ್ಲಿಸಬೇಕಾದ ದಾಖಲೆ ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‌ಸೈಟ್: bcwdhelpline@gmail.com ಮಾಹಿತಿಗಾಗಿ ಇಮೇಲ್ postmatrichelp@karnataka.gov.in ಮತ್ತು 8050770005 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.