ADVERTISEMENT

ಆನೇಕಲ್: ಪೊಲೀಸರ ತೆರದ ಮನೆ ಸಂವಾದ ಕಾರ್ಯಕ್ರಮ

‘ಪೊಲೀಸ್‌ ಎಂದರೆ ಭಯವಲ್ಲ ಭರವಸೆ’

​ಪ್ರಜಾವಾಣಿ ವಾರ್ತೆ
Published 8 ಜೂನ್ 2024, 13:06 IST
Last Updated 8 ಜೂನ್ 2024, 13:06 IST
ಆನೇಕಲ್ ಪೊಲೀಸ್‌ ಠಾಣೆಯಲ್ಲಿ ಪೊಲೀಸರ ತೆರದ ಮನೆ ಸಂವಾದದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು
ಆನೇಕಲ್ ಪೊಲೀಸ್‌ ಠಾಣೆಯಲ್ಲಿ ಪೊಲೀಸರ ತೆರದ ಮನೆ ಸಂವಾದದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು   

ಆನೇಕಲ್: ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಪೊಲೀಸರ ತೆರದ ಮನೆ ಸಂವಾದ ಕಾರ್ಯಕ್ರಮ ನಡೆಯಿತು.

ಪಟ್ಟಣದ ಅಕ್ಷರ ಕಾಲೇಜಿನ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಪೊಲೀಸ್‌ ಠಾಣೆಯಲ್ಲಿನ ಪ್ರಕ್ರಿಯೆಗಳ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದರು.

ಸರ್ಕಲ್‌ ಇನ್‌ಸ್ಪೆಕ್ಟರ್‌ ತಿಪ್ಪೇಸ್ವಾಮಿ ಮಾತನಾಡಿ, ಪೊಲೀಸ್‌ ಎಂದರೆ ಭಯವಲ್ಲ. ಭರವಸೆ ಎಂಬ ವಾತಾವರಣವನ್ನು ನಿರ್ಮಿಸುವ ಸಲುವಾಗಿ ಆನೇಕಲ್ ಪೊಲೀಸ್‌ ಠಾಣೆಯಲ್ಲಿ ಜನಸ್ನೇಹಿ ಕಾರ್ಯಕ್ರಮ ರೂಪಿಸಲಾಗಿದೆ. ಯುವಕರು ಪೊಲೀಸ್‌ ಇಲಾಖೆಯ ಬಗ್ಗೆ ಮಾಹಿತಿ ಪಡೆಯಲು ತೆರದ ಮನೆ ಕಾರ್ಯಕ್ರಮ ಉಪಯುಕ್ತವಾಗಿದೆ ಎಂದು ತಿಳಿಸಿದರು.

ADVERTISEMENT

ಇತ್ತೀಚಿನ ದಿನಗಳಲ್ಲಿ ಯುವಕರು ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಸಮಾಜದ ಸತ್ಪ್ರಜೆ ಆಗಲು ಯುವಕರು ಉತ್ತಮ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮಾದಕ ವಸ್ತುಗಳ ಬಳಕೆ ಮತ್ತು ಮರಾಟದ ಬಗ್ಗೆ ಅರಿವಿರಬೇಕು. ಇಲ್ಲವಾದಲ್ಲಿ ಯುವ ಸಮುದಾಯ ದಾರಿ ತಪ್ಪುವ ಸಾಧ್ಯತೆ ಇದೆ. ಕೆಲವು ಯುವಕರು ಮತ್ತು ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿಯೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ದುರಂತ. ವಿದ್ಯಾರ್ಥಿಗಳು ತಮ್ಮ ಶ್ರಮವನ್ನು ಅಪರಾಧ ಕೃತ್ಯಗಳಿಗೆ ಬಳಸದೇ ಅಧ್ಯಯನ, ಯಶಸ್ಸಿನತ್ತ ಗಮನ ವಹಿಸಿದರೆ ಉನ್ನತ ಸಾಧನೆ ಮಾಡಬಹುದು ಎಂದು ತಿಳಿಸಿದರು.

ಸಬ್‌ ಇನ್‌ಸ್ಪೆಕ್ಟರ್‌ಗಳಾದ ಪ್ರದೀಪ್‌ ಕುಮಾರ್, ರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.