ADVERTISEMENT

ಅನ್ಯಭಾಷಿಕರು ಕನ್ನಡ ಕಲಿಯಬೇಕು: ಬಿ.ಟಿ.ಲಲಿತಾ ನಾಯಕ್‌

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2024, 15:49 IST
Last Updated 9 ನವೆಂಬರ್ 2024, 15:49 IST
ಆನೇಕಲ್‌ನ ಅಲಯನ್ಸ್‌ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಾಹಿತಿ ಬಿ.ಟಿ.ಲಲಿತಾ ನಾಯಕ್‌ ಉದ್ಘಾಟಿಸಿದರು
ಆನೇಕಲ್‌ನ ಅಲಯನ್ಸ್‌ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಾಹಿತಿ ಬಿ.ಟಿ.ಲಲಿತಾ ನಾಯಕ್‌ ಉದ್ಘಾಟಿಸಿದರು   

ಆನೇಕಲ್: ಅಲಯನ್ಸ್‌ ವಿಶ್ವವಿದ್ಯಾಲಯದಲ್ಲಿ ಈಚೆಗೆ ಕನ್ನಡ ರಾಜ್ಯೋತ್ಸವ ಆಯೋಜಿಸಲಾಗಿತ್ತು. ಡೊಳ್ಳು ಕುಣಿತ, ಯಕ್ಷಗಾನ, ತಮಟೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ರಾಜ್ಯೋತ್ಸವಕ್ಕೆ ಮೆರಗು ನೀಡಿದವು. ವಿದ್ಯಾರ್ಥಿಗಳಿಗೆ ಸಾಹಿತ್ಯ ಚರ್ಚೆ ಸೇರಿದಂತೆ ವಿವಿಧ ಸ್ಪರ್ಧೆಯಲ್ಲಿ ಆಯೋಜಿಸಲಾಗಿತ್ತು. 

ಕಾರ್ಯಕ್ರಮ ಉದ್ಘಾಟಿಸಿದ ಸಾಹಿತಿ ಬಿ.ಟಿ.ಲಲಿತಾ ನಾಯಕ್‌, ಕನ್ನಡ ಭಾಷೆ ಒಂದು ಶಕ್ತಿ. ತಿಯೊಬ್ಬರಿಗೂ ತಮ್ಮ ಮಾತೃಭಾಷೆ ಮೇಲೆ ಪ್ರೀತಿಯಿರುತ್ತದೆ. ಕರ್ನಾಟಕದಲ್ಲಿರುವ ಅನ್ಯಭಾಷಿಕರು ಕನ್ನಡ ಕಲಿಯಬೇಕು. ಈ ಭಾಷೆಯ ಆನಂದ ಆಸ್ವಾದಿಸಬೇಕು ಎಂದರು.

ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಅಲಯನ್ಸ್‌ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಕೇಂದ್ರ ಮತ್ತು ಸಾಹಿತ್ಯ ವಿಭಾಗದಿಂದ ಕನ್ನಡ ಕಲಿಸುವ ಕಾರ್ಯಕ್ರಮ ರೂಪಿಸಲಾಗುವುದು. ಈ ಮೂಲಕ ಅನ್ಯಭಾಷಿಕ ವಿದ್ಯಾರ್ಥಿಗಳು ಕನ್ನಡ ಭಾಷೆ ಕಲಿಯಲು ಪೂರಕ ಅವಕಾಶ ನೀಡಲಾಗುವುದು ಎಂದು ವಿಶ್ವವಿದ್ಯಾಲಯದ ರಿಜಿಸ್ಟರ್‌ ಮಠಂ ವಿಶ್ವನಾಥಯ್ಯ ಹೇಳಿದರು.

ADVERTISEMENT

ವಿಶ್ವವಿದ್ಯಾಲಯದ ಆಡಳಿತ ಮಂಡಳಿತ ಶೈಲಾ ಛೆಬ್ಬಿ , ಉಪ ಕುಲಪತಿ ಪ್ರಿಸ್ಲಿ ಶಾನ್‌, ಕನ್ನಡ ಭಾಷಾ ಕೇಂದ್ರದ ವಿವೇಕಾನಂದ ಸಜ್ಜನ್ ಇದ್ದರು.

ಆನೇಕಲ್‌ನ ಅಲಯನ್ಸ್‌ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿನ ಯಕ್ಷಗಾನದ ನೋಟ
ಆನೇಕಲ್‌ನ ಅಲಯನ್ಸ್‌ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಡೊಳ್ಳುಕುಣಿತ ಕಲಾವಿದರು ಗಮನ ಸೆಳೆದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.