ADVERTISEMENT

ರಾತ್ರಿ 8 ರಿಂದ 10ರವರೆಗೆ ಪಟಾಕಿ ಹಚ್ಚಲು ಅವಕಾಶ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2024, 14:34 IST
Last Updated 30 ಅಕ್ಟೋಬರ್ 2024, 14:34 IST

ದೇವನಹಳ್ಳಿ: ‘ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಉಪಯೋಗವನ್ನು ನಿಷೇಧಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಶಿವಶಂಕರ.ಎನ್ ತಿಳಿಸಿದ್ದಾರೆ.

ಹಬ್ಬದ ದಿನದಂದು ರಾತ್ರಿ 8 ಗಂಟೆಯಿಂದ ರಾತ್ರಿ 10ರವರೆಗೆ ಮಾತ್ರ ಪಟಾಕಿ ಹಚ್ಚಲು ಅವಕಾಶವಿದೆ. ಬೆಳಗಿನ ಸಮಯದಲ್ಲಿ ನಿಶ್ಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತಲಿನ ಪ್ರದೇಶದಲ್ಲಿ ನಿಷೇಧಿತ ಪಟಾಕಿಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು.

ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಬಹುದಾಗಿದೆ. ಹಸಿರು ಪಟಾಕಿ ಬಳಸಿ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸಿ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.