ADVERTISEMENT

ಮುಳಬಾಗಿಲು: ಹೋಬಳಿ ಕ್ರೀಡಾಕೂಟಕ್ಕೆ ಪ್ರತಿಭಟನೆ ಬಿಸಿ

ಕಪ್ಪುಪಟ್ಟಿ ಧರಿಸಿ ದೈಹಿಕ ಶಿಕ್ಷಣ ಶಿಕ್ಷಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 15:25 IST
Last Updated 1 ಆಗಸ್ಟ್ 2024, 15:25 IST
ಮುಳಬಾಗಿಲು ತಾಲ್ಲೂಕಿನ ನಂಗಲಿಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬೈರಕೂರು ಹೋಬಳಿ ಮಟ್ಟದ ಕ್ರೀಡಾ ಕೂಟದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೈಗಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು
ಮುಳಬಾಗಿಲು ತಾಲ್ಲೂಕಿನ ನಂಗಲಿಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬೈರಕೂರು ಹೋಬಳಿ ಮಟ್ಟದ ಕ್ರೀಡಾ ಕೂಟದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೈಗಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು   

ಮುಳಬಾಗಿಲು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಸಂಕೇತವಾಗಿ ತಾಲ್ಲೂಕಿನ ದೈಹಿಕ ಶಿಕ್ಷಣ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ನಂಗಲಿಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬೈರಕೂರು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಕರ್ತವ್ಯ ನಿರ್ವಹಿಸಿದರು.

ರಾಜ್ಯದಲ್ಲಿ ಸುಮಾರು 25 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಾಗಿಲ್ಲ. ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಬದಲಾವಣೆ ಆಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಹೋಬಳಿ ಮಟ್ಟದ ಕ್ರೀಡಾಕೂಟದ ಉದ್ದಕ್ಕೂ ಕೈಗಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡೇ ತೀರ್ಪುಗಾರರಾಗಿ ಕರ್ತವ್ಯ ನಿರ್ವಹಿಸಲಾಗುವುದು. ನಂತರ ನೇಮಕಾತಿ ಪ್ರಕ್ರಿಯೆಗಳು ಪಡೆಯುವವರೆಗೂ ರಾಜ್ಯದೆಲ್ಲೆಡೆ ಉಗ್ರ ಹೋರಾಟ ನಡೆಸಲಾಗುವುದು. ತಾತ್ಕಾಲಿಕವಾಗಿ ಮಕ್ಕಳಿಗೆ ತೊಂದರೆಯಾಗಬಾರದು ಎಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದೇವೆ ಎಂದು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಶಂಕರಪ್ಪ ಹೇಳಿದರು.

ADVERTISEMENT

2023ರ ಜುಲೈ ತಿಂಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿ ಹಾಗೂ ವೃಂದ ನಿಯಮಗಳ ಬದಲಾವಣೆಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ಪ್ರತಿಭಟನೆ ನಡೆದಿತ್ತು .ಸರ್ಕಾರ ಭರವಸೆ ನೀಡಿದ್ದರೂ ಇದುವರೆಗೂ ಯಾವುದೇ ಪ್ರಕ್ರಿಯೆ ನಡೆಸಿಲ್ಲ. ಇನ್ನಾದರೂ ಕೂಡಲೇ ನೇಮಕಾತಿ ಪ್ರಕ್ರಿಯೆಗೆ ಮುಂದಾಗದೆ ಇದ್ದಲ್ಲಿ ಆಗಸ್ಟ್ 15 ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಮಯದಲ್ಲಿ ರಾಜ್ಯ ಮಟ್ಟದ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ ಎಂದು ತಾಲ್ಲೂಕು ಸಂಘದ ಗೌರವಾಧ್ಯಕ್ಷ ರಹೀಮ್ ಷರೀಪ್ ಹೇಳಿದರು.

ತಾಲ್ಲೂಕಿನ ಒಟ್ಟು 44 ಮಂದಿ ಸರ್ಕಾರಿ, ಅನುದಾನಿತ ಹಾಗೂ ಖಾಸಗೀ ಶಿಕ್ಷಕರು ಕ್ರೀಡಾಕೂಟದ ಕೊನೆಯವರೆಗೂ ಕಪ್ಪು ಪಟ್ಟಿಗಳನ್ನು ಕೈಗಳಿಗೆ ಕಟ್ಟಿಕೊಂಡೇ ಕರ್ತವ್ಯ ನಿರ್ವಹಿಸಿದರು.

ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ನಾಗರಾಜ್, ಖಜಾಂಚಿ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ರವೀಂದ್ರ, ಕ್ರೀಡಾ ಕಾರ್ಯದರ್ಶಿ ಸುಬ್ರಮಣಿ, ಮರವೇಮನೆ ಎಂ.ವಿ.ವೆಂಕಟೇಶ್, ಎಸ್.ಶಂಕರಪ್ಪ, ಮಂಜುನಾಥ್, ಸಲೀಮ್, ಕೆರಸಿಮಂಗಲ ಮುನಿಸ್ವಾಮಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.