ADVERTISEMENT

ಕನಕಪುರ: ರಸ್ತೆ ಗುಂಡಿಗಳಲ್ಲಿ ಸಸಿ ನಾಟಿ!

ರಸ್ತೆ ಅಭಿವೃದ್ಧಿಗೆ ಬರಡನಹಳ್ಳಿ ಗ್ರಾಮಸ್ಥರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2024, 14:32 IST
Last Updated 6 ಅಕ್ಟೋಬರ್ 2024, 14:32 IST
<div class="paragraphs"><p>ಕನಕಪುರ ಬರಡನಹಳ್ಳಿ ಗ್ರಾಮದ ರಸ್ತೆಯಲ್ಲಿನ ಗುಂಡಿಯಲ್ಲಿ ಸಸಿ ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದ ಗ್ರಾಮಸ್ಥರು</p></div>

ಕನಕಪುರ ಬರಡನಹಳ್ಳಿ ಗ್ರಾಮದ ರಸ್ತೆಯಲ್ಲಿನ ಗುಂಡಿಯಲ್ಲಿ ಸಸಿ ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದ ಗ್ರಾಮಸ್ಥರು

   

ಕನಕಪುರ: ಹಲವು ವರ್ಷಗಳಿಂದ ಹದಗೆಟ್ಟಿರುವ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕೆಂದು ಒತ್ತಾಯಿಸಿ, ರಸ್ತೆ ಗುಂಡಿಯಲ್ಲಿ ಸಸಿಗಳನ್ನು ನಾಟಿ ಮಾಡುವ ಮೂಲಕ ಬರಡನಹಳ್ಳಿ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿದರು.

ಕಸಬಾ ಹೋಬಳಿ ಬರಡನಹಳ್ಳಿ ಗ್ರಾಮಸ್ಥರು ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿ, ಅಲ್ಲಿ ಸಸಿ ನಾಟಿ ಮಾಡಿ, ಪಂಚಾಯಿತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಕನಕಪುರದಿಂದ ಜವನಮ್ಮನದೊಡ್ಡಿ ಮಾರ್ಗವಾಗಿ ಬರಡನಹಳ್ಳಿಗೆ ಹೋಗುವ ಪ್ರಮುಖ ರಸ್ತೆ ಇದಾಗಿದ್ದು, ಮಂಡಿಮಟ್ಟದ ಗುಂಡಿ ಬಿದ್ದು ತೀರ ಹಾಳಾಗಿದೆ. ಆದರೂ ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದರು.

ರಸ್ತೆ ಅಭಿವೃದ್ಧಿಪಡಿಸುವಂತೆ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಗ್ರಾಮ ಪಂಚಾಯಿತಿ, ತಾಲ್ಲೂಕು ಆಡಳಿತಕ್ಕೆ ಗ್ರಾಮಸ್ಥರು ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಯಾರಿಂದಲೂ ಸ್ಪಂದನೆ ದೊರೆತಿಲ್ಲ ಎಂದು ಪ್ರತಿಭಟನನಿರತರು ಬೇಸರಿಸಿದರು.

ಜನ ಸಂಪರ್ಕ ಸಭೆಯಲ್ಲೂ ಈ ಬಗ್ಗೆ ಹಲವು ಬಾರಿ ದನಿ ಎತ್ತಲಾಗಿದೆ. ಗುಂಡಿ ಮುಚ್ಚುವ ಭರವಸೆ ನೀಡಿದ್ದಾರೆ ಹೊರತೆ ಇಲ್ಲಿಯ ತನಕ ಅಭಿವೃದ್ಧಿ ಆಗಲಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಲ್ಕು ಮನೆ ಇರುವ ಜಾಗಕ್ಕೂ ಡಾಂಬರ್ ಇಲ್ಲವೇ ಕಾಂಕ್ರೀಟ್ ರಸ್ತೆಗಳಾಗಿವೆ. ಇಡೀ ತಾಲ್ಲೂಕನ್ನು ಅಭಿವೃದ್ಧಿಪಡಿಸುತ್ತಿರುವ ಕ್ಷೇತ್ರದ ಶಾಸಕರು, ನಮ್ಮ ಗ್ರಾಮದ ರಸ್ತೆಯನ್ನು ಅಭಿವೃದ್ಧಿಪಡಿಸಬೇಕೆಂದು ಬರಡನಹಳ್ಳಿ ಗ್ರಾಮದ ಜನತೆ ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.